ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳಲ್ಲಿ ಹೆಚ್ಚುತ್ತಿದೆ ಜ್ವರ ಸಮಸ್ಯೆ

Last Updated 12 ಮಾರ್ಚ್ 2021, 19:53 IST
ಅಕ್ಷರ ಗಾತ್ರ

ಬೆಂಗಳೂರು: ಬಿಸಿಲಿನ ಧಗೆ ಹೆಚ್ಚಾಗುತ್ತಿರುವುದರಿಂದ ನಗರದಲ್ಲಿ 1ರಿಂದ 5 ವರ್ಷದೊಳಗಿನ ಮಕ್ಕಳು ಅನಾರೋಗ್ಯಕ್ಕೆ ಈಡಾಗುತ್ತಿರುವುದು ಪೋಷಕರನ್ನು ಚಿಂತೆಗೆ ದೂಡಿದೆ.

ಶಾಲೆಗೆ ತೆರಳುತ್ತಿರುವ ಮಕ್ಕಳಲ್ಲಿಯೂ ಜ್ವರ ಮತ್ತು ಗಂಟಲು ಕೆರೆತದಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆ.

‘ಕಳೆದ ಎರಡು ವಾರದ ಅವಧಿ ಪರಿಗಣಿಸಿದರೆ ಜ್ವರದ ಸಮಸ್ಯೆಯಿಂದ ಆಸ್ಪತ್ರೆಗೆ ಬರುತ್ತಿರುವ ಮಕ್ಕಳ ಪ್ರಮಾಣದಲ್ಲಿ ಶೇ 30ರಷ್ಟು ಹೆಚ್ಚಾಗಿದೆ. 1ರಿಂದ 5ವರ್ಷದ ಮಕ್ಕಳಲ್ಲಿ ಶೀತ, ಕೆಮ್ಮು, ಜ್ವರ, ಉಬ್ಬಸ, ಮಲಬದ್ಧತೆ, ವಾಂತಿಯ ಸಮಸ್ಯೆಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿವೆ’ ಎಂದು ಆಸ್ಟರ್‌ ಸಿಎಂಐ ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ತಜ್ಞ ಡಾ. ಕೆ.ಎ. ಸುಧೀರ್ ಹೇಳಿದರು.

‘ಬಿಸಿಲಿನ ಧಗೆ ಹೆಚ್ಚಾಗುತ್ತಿರುವುದರಿಂದ ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಈ ರೀತಿಯ ಜ್ವರದಿಂದ ಬಳಲುತ್ತಿರುವ ಮಕ್ಕಳು ಮೂರು–ನಾಲ್ಕು ದಿನಗಳಲ್ಲಿ ಗುಣಮುಖರಾಗುತ್ತಾರೆ’ ಎಂದು ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ಡಾ. ಶರಿಲ್ ಹೆಗ್ಡೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT