ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡದಲ್ಲಿ ತೀರ್ಪು ಬಂದರೆ ಜನರಿಗೆ ಅನುಕೂಲ: ನಾಗಾಭರಣ

Last Updated 4 ಜನವರಿ 2020, 6:57 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ಹೈಕೋರ್ಟ್‌ನಲ್ಲಿ ಕನ್ನಡತೀರ್ಪುಗಳು ಬರುವಂತಾದರೆ ಶ್ರೀಸಾಮಾನ್ಯನಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅಭಿಪ್ರಾಯಪಟ್ಟರು.

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ಪ್ರಾಧಿಕಾರ ಆಯೋಜಿಸಿದ್ದ ‘ನ್ಯಾಯಾಂಗದಲ್ಲಿ ಕನ್ನಡ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಇದೇ ವೇಳೆ ಕನ್ನಡದಲ್ಲಿ ಆದೇಶ ಬರೆಯಿಸಿದ ನ್ಯಾಯಾಧೀಶರು ಹಾಗೂ ಕನ್ನಡದಲ್ಲಿ ವಾದ ಮಂಡಿಸಿದ ಸರ್ಕಾರಿ ಅಭಿಯೋಜಕರು ಹಾಗೂ ವಕೀಲರಿಗೆ ‘ನ್ಯಾಯಾಂಗ ಕನ್ನಡ ಪ್ರಶಸ್ತಿ’ಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರದಾನ ಮಾಡಿದರು.

ಹೈಕೋರ್ಟ್ ಕಲಾಪದಲ್ಲಿ ಕನ್ನಡ ಬಳಕೆ ಹೆಚ್ಚಾಗಬೇಕು ಎಂದು ಆಗ್ರಹಿಸಿ ವಕೀಲರು ಕೆ.ಬಿ.ಕೆ. ಸ್ವಾಮಿ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡದಲ್ಲಿ ಆದೇಶ ಬರೆಯಿಸಿದ ನ್ಯಾಯಾಧೀಶರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸನ್ಮಾನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT