ಬೆಂಗಳೂರು: ಬೆಂಗಳೂರು ನಗರದ ಸಾರ್ವಜನಿಕ ಪ್ರದೇಶಗಳಲ್ಲಿರುವ ಸಾರ್ವಜನಿಕ ಶೌಚಾಲಯಗಳ ಸಂಖ್ಯೆ ಹೆಚ್ಚಿಸುವುದರ ಜೊತೆಗೆ ಸರಿಯಾಗಿ ನಿರ್ವಹಣೆ ಮಾಡಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಜಿಬಿಎ ಮುಖ್ಯ ಆಯುಕ್ತರಿಗೆ ಪತ್ರ ಬರೆದಿರುವ ಅವರು, ‘ಬೆಂಗಳೂರು ನಗರದ ಸಾರ್ವಜನಿಕ ಪ್ರದೇಶಗಳಲ್ಲಿ ಸಾರ್ವಜನಿಕ ಶೌಚಾಲಯಗಳ ಸಂಖ್ಯೆ ಕಡಿಮೆ ಇದ್ದು, ಮಹಿಳೆಯರು ಸೇರಿದಂತೆ ಸಾರ್ವಜನಿಕರು ಪರದಾಡುತ್ತಿದ್ದಾರೆ. ಪ್ರಸ್ತುತ ನಗರದಲ್ಲಿ ಇರುವ ಶೌಚಾಲಯಗಳು ಸಮರ್ಪಕವಾಗಿ ನಿರ್ವಹಣೆಯಾಗದೇ, ಮಹಿಳೆಯರ ಅನಾರೋಗ್ಯಕ್ಕೆ ಕಾರಣವಾಗುತ್ತಿವೆ. ಶೌಚಾಲಯಗಳ ಸಂಖ್ಯೆ ಹೆಚ್ಚಿಸುವುದು ಸೇರಿದಂತೆ ಶುಚಿತ್ವ ಕಾಪಾಡಿಕೊಳ್ಳುವಂತೆ ಸಂಬಂಧಪಟ್ಟ ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.