ಶನಿವಾರ, ಜುಲೈ 2, 2022
25 °C

ತರಬೇತುದಾರರ ವೇತನ ಶೇ20ರಷ್ಟು ಹೆಚ್ಚಳ: ಸರ್ಕಾರ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಕ್ರೀಡಾ ಪ್ರಾಧಿಕಾರದಲ್ಲಿ ಸಂಚಿತ ವೇತನದ ಆಧಾರದಲ್ಲಿ ಕೆಲಸ ಮಾಡುತ್ತಿರುವ ತರಬೇತುದಾರರ ವೇತನವನ್ನು ಶೇ20ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.

ಪದವಿ ಮತ್ತು ಕ್ರೀಡಾ ತರಬೇತಿಯಲ್ಲಿ ಡಿಪ್ಲೊಮಾ ಪಡೆದ ತರಬೇತುದಾರರಿಗೆ ಸದ್ಯ ₹39,960 ವೇತನ ನೀಡಲಾಗುತ್ತಿದ್ದು, ಅದನ್ನು ₹47,952ಕ್ಕೆ ಹೆಚ್ಚಿಸಲಾಗಿದೆ. ಪದವೀಧರರಲ್ಲದ ತರಬೇತುದಾರರಿಗೆ ಇದ್ದ ₹31,050 ವೇತನವನ್ನು ₹37,260ಕ್ಕೆ ಹೆಚ್ಚಿಸಲಾಗಿದೆ. ಏಪ್ರಿಲ್ 1ರಿಂದ ಹೊಸ ವೇತನ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು