ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಮತದಾರರ ಸಂಖ್ಯೆ ಹೆಚ್ಚಳ

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಅಂತ್ಯ
Last Updated 10 ಫೆಬ್ರವರಿ 2020, 19:49 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಮುಕ್ತಾಯ ವಾಗಿದ್ದು, ಮಹಿಳಾ ಮತದಾರರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.

ಜನವರಿ 1ಕ್ಕೆ ಅರ್ಹತಾ ದಿನಾಂಕವನ್ನು ನಿಗದಿಪಡಿಸಿ ಪಟ್ಟಿ ಪರಿಷ್ಕರಿಸಲಾಗಿದ್ದು, ಒಂದು ಸಾವಿರ ಪುರುಷ ಮತದಾರರ ಸಂಖ್ಯೆಗೆ ಹೋಲಿಸಿದರೆ ಮಹಿಳೆಯರ ಪ್ರಮಾಣ 981ಕ್ಕೆ ಏರಿಕೆಯಾಗಿದೆ. 2019ರಲ್ಲಿ ಈ ಪ್ರಮಾಣ 976, 2018ರ ವಿಧಾನಸಭೆ ಚುನಾವಣೆ ಸಮಯದಲ್ಲಿ 974 ಹಾಗೂ 2018ರ ಸಂಕ್ಷಿಪ್ತ ಪರಿಷ್ಕರಣೆ ಸಮಯದಲ್ಲಿ ಮಹಿಳೆಯರ ಸಂಖ್ಯೆ 972 ಇತ್ತು.

2013ರಲ್ಲಿ ಸಾವಿರ ಪುರುಷ ಮತದಾರರ ಸಂಖ್ಯೆಗೆ ಹೋಲಿಸಿದರೆ 958 ಮಹಿಳೆಯರು ಇದ್ದು, ಕಳೆದ ಏಳು ವರ್ಷಗಳಲ್ಲಿ ಮಹಿಳಾ ಮತದಾರರ ಸಂಖ್ಯೆಯಲ್ಲಿ (981) ಸಾಕಷ್ಟು ಹೆಚ್ಚಳವಾಗಿರುವುದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಕಚೇರಿ ಬಿಡುಗಡೆಮಾಡಿರುವ ಮತದಾರರ ಪಟ್ಟಿಯಿಂದ ಗೊತ್ತಾಗುತ್ತದೆ.

ಪುರುಷರು 2.60 ಕೋಟಿ, ಮಹಿಳೆಯರು 2.55 ಕೋಟಿ ಸೇರಿದಂತೆ ಒಟ್ಟು 5.15 ಕೋಟಿ ಮತದಾರರು ಇದ್ದಾರೆ. 7.47 ಲಕ್ಷ ಯುವ ಮತದಾರರು ಸೇರ್ಪಡೆಯಾಗಿದ್ದಾರೆ. ವಿವಿಧ ಕಾರಣಗಳಿಂದಾಗಿ 3.98 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಜ. 1ಕ್ಕೆ 18 ವರ್ಷ ತುಂಬಿದವರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಬಹುದು. ವಿವರಗಳಿಗೆ www.voterreg.kar.nic.in ಅಥವಾ nvsp.in.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT