ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹಾಸಿಗೆ ಹೆಚ್ಚಿಸಲು ಸೂಚನೆ

Last Updated 7 ಏಪ್ರಿಲ್ 2021, 4:48 IST
ಅಕ್ಷರ ಗಾತ್ರ

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್‌ ರೋಗಿಗಳ ಚಿಕಿತ್ಸೆಗೆ ಮೀಸಲಿಟ್ಟ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ಸೂಚನೆ ನೀಡಿದರು.

ಅವರು ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಆಸ್ಪತ್ರೆಯಲ್ಲಿ ಪ್ರಸ್ತುತ 150 ಹಾಸಿಗೆಗಳನ್ನು ಮಾತ್ರ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಮೀಸಲಿಡಲಾಗಿದೆ.

ಆಸ್ಪತ್ರೆಯಲ್ಲಿ ಕೋವಿಡ್‌ ಲಸಿಕೆ ನೀಡಲು ಮೂರು ಕೇಂದ್ರಗಳನ್ನು ತೆರೆಯಲಾಗಿದೆ. ಪ್ರತಿ ಕೇಂದ್ರದಲ್ಲಿ 100 ಮಂದಿಗೆ ಲಸಿಕೆ ನೀಡಬಹುದು. ಆದರೂ ಇಲ್ಲಿ ನಿತ್ಯ 100ರಿಂದ 120 ಮಂದಿಗಷ್ಟೇ ಲಸಿಕೆ ನೀಡಲಾಗುತ್ತಿದೆ.

‘ಇಲ್ಲಿ ಕನಿಷ್ಟ ಪಕ್ಷ 300 ಮಂದಿಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು. ಆಸ್ಪತ್ರೆಗೆ ಬರುವ ಹೊರರೋಗಿಗಳೂ ಇಲ್ಲಿ ಲಸಿಕೆ ಪಡೆಯಲು ಅವಕಾಶ ಕಲ್ಪಿಸಬೇಕು’ ಎಂದು ಗೌರವ ಗುಪ್ತ ಸಲಹೆ ನೀಡಿದರು.

ಬಿಬಿಎಂಪಿಯ ವಿಶೇಷ ಆಯುಕ್ತ (ಆರೋಗ್ಯ) ರಾಜೇಂದ್ರ ಚೋಳನ್, ಮುಖ್ಯ ಆರೋಗ್ಯಾಧಿಕಾರಿ ಡಾ. ವಿಜಯೇಂದ್ರ, ಪಶ್ಚಿಮ ವಲಯ ಆರೋಗ್ಯಾಧಿಕಾರಿ ಡಾ.ಮನೋರಂಜನ್ ಹೆಗ್ಡೆ ಜತೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT