ಬೆಂಗಳೂರು: ಬೈಕ್ನಲ್ಲಿ ತೆರಳುವಾಗ ಅಸಭ್ಯವಾಗಿ ವರ್ತಿಸಿದ್ದವರನ್ನು ನಗರ ಸಂಚಾರ ಪೊಲೀಸರು ಪತ್ತೆಹಚ್ಚಿ ದಂಡ ವಸೂಲಿ ಮಾಡಿದ್ದಾರೆ.

ಸಂಚಾರ ನಿಯಮ ಉಲ್ಲಂಘಿಸಿ ಮೂವರು ಬೈಕ್ ಸಂಚಾರ ಮಾಡಿದ್ದಲ್ಲದೇ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ್ದ ದ್ವಿಚಕ್ರ ವಾಹನ ಸವಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಮಾಧ್ಯಮದಲ್ಲಿ ಸಾರ್ವಜನಿಕರು ಆಗ್ರಹಿಸಿದ್ದರು.

ದ್ವಿಚಕ್ರ ವಾಹನದಲ್ಲಿ ಇಬ್ಬರು ಯುವಕರು ಹಾಗೂ ಯುವತಿ ರಾಗಿಗುಡ್ಡ ಬಸ್ ನಿಲ್ದಾಣದ ಕಡೆಯಿಂದ ಮೆಟ್ರೊ ನಿಲ್ದಾಣದ ಕಡೆಗೆ ಹೊರಟಿದ್ದರು. ಈ ವೇಳೆ ಯುವಕ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ. ಆತನ ಹಿಂದೆ ಯುವಕ ಮತ್ತು ಯುವತಿ ಕುಳಿತಿದ್ದರು. ದ್ವಿಚಕ್ರ ವಾಹನ ಚಾಲನೆಯಲ್ಲಿ ಇರುವಾಗಲೇ ಮಧ್ಯದಲ್ಲಿ ಕುಳಿತಿದ್ದ ಯುವಕ ಮತ್ತು ಯುವತಿ ಪರಸ್ಪರ ಚುಂಬಿಸಿಕೊಂಡು ಅಸಭ್ಯವಾಗಿ ವರ್ತಿಸಿದ್ದರು.

ಈ ದೃಶ್ಯವನ್ನು ದ್ವಿಚಕ್ರ ವಾಹನ ಸವಾರರೊಬ್ಬರು, ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದು ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದರು. ಅದನ್ನು ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿ ದಂಡ ವಿಧಿಸಿದ್ದಾರೆ. ರಾಗಿಗುಡ್ಡ ಮೆಟ್ರೊ ನಿಲ್ದಾಣದ ಬಳಿ ಫೆ.7ರ ರಾತ್ರಿ ಈ ಘಟನೆ ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.