ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಲಿಂಗಧೀರನಹಳ್ಳಿ ತ್ಯಾಜ್ಯ ಘಟಕ ಮುಚ್ಚಲು ಆಗ್ರಹಿಸಿ ಅನಿರ್ದಿಷ್ಟ ಧರಣಿ

Last Updated 15 ಫೆಬ್ರುವರಿ 2023, 7:02 IST
ಅಕ್ಷರ ಗಾತ್ರ

ಬೆಂಗಳೂರು: ಲಿಂಗಧೀರನಹಳ್ಳಿ ತ್ಯಾಜ್ಯ ಸಂಸ್ಕರಣೆ ಘಟಕದಿಂದ ಬನಶಂಕರಿ 6ನೇ ಹಂತದ ಸುತ್ತಮುತ್ತಲಿನ ನಾಗರಿಕರಿಗೆ ತೊಂದರೆಯಾಗುತ್ತಿದ್ದು, ಅದನ್ನು ಮುಚ್ಚಬೇಕು ಎಂದು ಆಗ್ರಹಿಸಿ ಬನಶಂಕರಿ 6ನೇ ಹಂತದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಮಂಗಳವಾರದಿಂದ ಅನಿರ್ದಿಷ್ಟ ಧರಣಿ ಆರಂಭಿಸಿದ್ದಾರೆ.

‘ಘಟಕ ಮುಚ್ಚಿ ಎಂಬ ಬೇಡಿಕೆ ಸಲ್ಲಿಸಿ 8 ತಿಂಗಳಿಂದ ಹೋರಾಟ ಮಾಡುತ್ತಿದ್ದೇವೆ. ಸಚಿವ ಎಸ್‌.ಟಿ. ಸೋಮಶೇಖರ್‌ ಅವರೂ ಈ ಬಗ್ಗೆ ಬಿಬಿಎಂಪಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಯವರು ಫೆ.9ರಂದು ಘಟಕ ಮುಚ್ಚಲು ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ. ಇಷ್ಟಾದರೂ ಬಿಬಿಎಂಪಿ ಮುಖ್ಯ ಆಯುಕ್ತರು ಕ್ರಮ ಕೈಗೊಂಡಿಲ್ಲ. ಹೀಗಾಗಿ ಹೋರಾಟ ಆರಂಭಿಸಿದ್ದೇವೆ’ ಎಂದು ನಿವಾಸಿಗಳು ತಿಳಿಸಿದರು.

‘ಇಲ್ಲಿ ತ್ಯಾಜ್ಯ ವಿಲೇವಾರಿ ಮಾಡುತ್ತಿರುವುದರಿಂದ ಸುತ್ತಲಿನ ನಾಲ್ಕೈದು ಕಿ.ಮೀ ವಾಸನೆ ಬೀರುತ್ತಿದೆ. ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ವಾಸಿಸಲು ಸಾಧ್ಯವಾಗುತ್ತಿಲ್ಲ. ಭೂಮಿ ಹಾಗೂ ಜಲತೊರೆಗಳಿಗೆ ಕಲ್ಮಶವೂ ಸೇರುತ್ತಿದೆ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT