ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧತೆ ಪೂರ್ವಭಾವಿ ಸಭೆ

Last Updated 25 ಜುಲೈ 2019, 19:02 IST
ಅಕ್ಷರ ಗಾತ್ರ

ಬೆಂಗಳೂರು: ಆಗಸ್ಟ್ 15ರಂದು ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ಆಚರಿಸಲಾಗುವ ‘ಸ್ವಾತಂತ್ರ್ಯ ದಿನಾಚರಣೆ’ ಕಾರ್ಯಕ್ರಮಕ್ಕೆ ಸಿದ್ಧತೆ ಆರಂಭವಾಗಿದ್ದು, ಭದ್ರತೆ ಸಂಬಂಧ ಚರ್ಚಿಸಲು ಪೊಲೀಸ್ ಕಮಿಷನರ್ ಅಲೋಕ್‌ಕುಮಾರ್ ನೇತೃತ್ವದಲ್ಲಿ ಗುರುವಾರ ಸಭೆ ನಡೆಯಿತು.

‘ದಿನಾಚರಣೆ ವೇಳೆ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭದ್ರತೆ ಕೈಗೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಆ ಬಗ್ಗೆ ಡಿಸಿಪಿಗಳಿಗೂ ಸೂಚನೆ ನೀಡಲಾಗಿದೆ’ ಎಂದು ಅಲೋಕ್‌ಕುಮಾರ್ ಹೇಳಿದರು.

‘ಮೈದಾನಕ್ಕೆ ಹೊಂದಿಕೊಂಡಿರುವ ಕಾಮರಾಜ ರಸ್ತೆಯಲ್ಲಿ ಮೆಟ್ರೊ ಕಾಮಗಾರಿ ನಡೆಯುತ್ತಿದ್ದು, ಅದರ ಅಕ್ಕ–ಪಕ್ಕದ ರಸ್ತೆಯಲ್ಲಿ ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರ ವಾಹನಗಳ ನಿಲುಗಡೆಗೆ ಸ್ಥಳ ನಿಗದಿ ಮಾಡುವಂತೆ ಹೆಚ್ಚುವರಿ ಪೊಲೀಸ್ ಕಮಿಷನರ್ (ಸಂಚಾರ) ಅವರಿಗೆ ನಿರ್ದೇಶನ ನೀಡಲಾಗಿದೆ’ ಎಂದರು.

‘ಕಾರ್ಯಕ್ರಮದಲ್ಲಿ ಶಕ್ತಿ ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡುವ ಬಿಎಸ್‌ಎಫ್‌, ಏರ್‌ಫೋರ್ಸ್‌, ಮಹಿಳಾ ಸಿಆರ್‌ಪಿಎಫ್‌, ಕೆಎಸ್‌ಆರ್‌ಪಿ, ಎನ್‌ಸಿಸಿ ಹಾಗೂ ಶಾಲಾ ಮಕ್ಕಳು ಆಗಸ್ಟ್ 9ರಿಂದ ತಾಲೀಮು ಆರಂಭಿಸಲಿದ್ದಾರೆ. ಇಂದಿನಿಂದಲೇ ಮೈದಾನದ ಸುತ್ತಲೂ ಭದ್ರತೆಗೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದು ಅಲೋಕ್‌ಕುಮಾರ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT