ಸೋಮವಾರ, ಆಗಸ್ಟ್ 26, 2019
20 °C

‘ಅಖಂಡ ಭಾರತ–ಕನಸು ನನಸು’

Published:
Updated:
Prajavani

ಕೆ.ಆರ್.ಪುರ: ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿರಬೇಕೆಂದು ಅಂದಿನ ಪ್ರಧಾನಿ ವಿ.ಪಿ. ಸಿಂಗ್ ಕಂಡ ಕನಸು ಇಂದು ನನಸಾಗಿದೆ ಎಂದು ಶಾಸಕ ಅರವಿಂದ ಲಿಂಬಾವಳಿ ತಿಳಿಸಿದರು.

ತಾಲ್ಲೂಕು ಆಡಳಿತ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಕೆ.ಆರ್.ಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 73 ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ‘ಬಿಜೆಪಿಯ ಚಿಂತನೆಗಳನ್ನು ಜಾರಿಗೊಳಿಸುವುದರ ಮೂಲಕ ಆಂತರಿಕ ಭದ್ರತೆ, ಉಗ್ರರ ನಿಗ್ರಹ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಭಾರಿ ಯಶಸ್ಸು ಸಾಧಿಸಿದ್ದೇವೆ’ ಎಂದರು.

ಸಮಿತಿ ಅಧ್ಯಕ್ಷ ಎನ್.ತೇಜಸ್ ಕುಮಾರ್ ಇದ್ದರು.

Post Comments (+)