ಈ ಸಂಬಂಧ ಹೋಟೆಲ್ ಮಾಲೀಕರ ಸಂಘಕ್ಕೆ ಪತ್ರ ಬರೆದಿರುವ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು, ‘ಹೋಟೆಲ್ ಮಾಲೀಕರು, ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳು ಹೋಟೆಲ್‌ಗಳಲ್ಲಿ ತಂಗುವ ಸಂಶಯಾಸ್ಪದ ವ್ಯಕ್ತಿಗಳು, ವಿದೇಶಿಯರು ಹಾಗೂ ಅಪರಿಚಿತರ ಬಗ್ಗೆ ನಿಗಾ ವಹಿಸಬೇಕು. ಅಲ್ಲದೇ ವಸತಿ ಗೃಹಗಳಲ್ಲಿ ವಾಸ್ತವ್ಯ ಮಾಡುವವರ ದಾಖಲೆಗಳನ್ನು ಪಡೆದುಕೊಳ್ಳಬೇಕು. ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದರೆ ಪೊಲೀಸರಿಗೆ ಮಾಹಿತಿ ನೀಡಬೇಕು’ ಎಂದು ಉಲ್ಲೇಖಿಸಿದ್ಧಾರೆ.