ಸ್ವಾತಂತ್ರ್ಯ ದಿನವನ್ನು ಆಚರಿಸಿದ ಬಳಿಕ ಬಹುತೇಕರು ಲಾಲ್ಭಾಗ್ಗೆ ಭಾರಿ ಸಂಖ್ಯೆಯಲ್ಲಿ ಭೇಟಿ ನೀಡಿದರು. ಬಂಡೆ, ಕೆರೆ ಏರಿ, ಬೋನ್ಸಾಯ್, ತರಕಾರಿ ಉದ್ಯಾನ, ಮಾರಾಟ ಮಳಿಗೆಗಳ ಬಳಿ ಕಿಕ್ಕಿರಿದ ಜನಸಂದಣಿ ಇತ್ತು. ಗಾಜಿನ ಮನೆಯಲ್ಲಿ ಜನದಟ್ಟಣೆ ಉಂಟಾಗಿ, ಸಾಲುಗಳನ್ನು ನಿಯಂತ್ರಿಸಲು ತೋಟಗಾರಿಕೆ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಹರಸಾಹಸಪಟ್ಟರು.