ಬೆಂಗಳೂರು: ಮುಂದಿನ ದೀರ್ಘಕಾಲೀನ ಯೋಜನೆಯ ಭಾಗವಾಗಿ ಮುಂಬೈ, ಬೆಂಗಳೂರು ಹಾಗೂ ಇತರ ಪ್ರಮುಖ ನಗರಗಳನ್ನ ಸಂಪರ್ಕಿಸುವ ಸುಮಾರು 7,000 ಕಿಮೀ ಉದ್ದದ ಬುಲೆಟ್ ರೈಲು ಜಾಲವನ್ನು ನಿರ್ಮಿಸುವ ಉದ್ದೇಶವಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು.

ಎಸ್ಎಂವಿಟಿ ಬೆಂಗಳೂರು–ಎಲ್ಟಿಟಿ ಮುಂಬೈ ಎಕ್ಸ್ಪ್ರೆಸ್ ರೈಲಿಗೆ ವರ್ಚುವಲ್ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಬೆಂಗಳೂರು–ಹೈದರಾಬಾದ್ ಹಾಗೂ ಬೆಂಗಳೂರು–ಚೆನ್ನೈ ನಡುವೆ ಬುಲೆಟ್ ಟ್ರೈನ್ ಕಾರಿಡಾರ್ಗಳಿಗೆ ಅನುಮೋದನೆ ನೀಡಲಾಗಿದೆ. ಪ್ರಸ್ತುತ ಕರ್ನಾಟಕದಲ್ಲಿ 12 ಜೋಡಿ ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ. ಬೆಂಗಳೂರು–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ರೈಲು ಓಡಿಸಲು ಪರೀಕ್ಷೆ ನಡೆಯುತ್ತಿದೆ. ಶೀಘ್ರದಲ್ಲೇ ಕರಾವಳಿ ಭಾಗದ ಸಂಪರ್ಕ ಮಡಗಾಂವ್ವರೆಗೆ ವಿಸ್ತರಿಸಲಿದೆ ಎಂದು ಮಾಹಿತಿ ನೀಡಿದರು.

ವಾರಕ್ಕೆ ಎರಡು ಬಾರಿ ಸಂಚರಿಸಲಿರುವ ಎಕ್ಸ್ಪ್ರೆಸ್ ರೈಲು ಆರಂಭವಾಗಿದೆ. ಬೆಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಸಂಚರಿಸಲಿದೆ. ಆಗ ದಕ್ಷಿಣ ಹಾಗೂ ಉತ್ತರ ಕರ್ನಾಟಕದ ಬಹುಕಾಲದ ಬೇಡಿಕೆ ಈಡೇರಲಿದೆ ಎಂದರು.

ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಕರ್ನಾಟಕದ 61 ರೈಲು ನಿಲ್ದಾಣಗಳನ್ನು ₹2,160 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಇದರಲ್ಲಿ 9 ನಿಲ್ದಾಣಗಳ ಕಾಮಗಾರಿ ಪೂರ್ಣಗೊಂಡಿದೆ. ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣವನ್ನು ₹485 ಕೋಟಿ ಹಾಗೂ ಯಶವಂತಪುರ ನಿಲ್ದಾಣವನ್ನು ₹367 ಕೋಟಿ ವೆಚ್ಚದಲ್ಲಿ ನವೀಕರಿಸಲಾಗುತ್ತಿದೆ ಎಂದು ತಿಳಿಸಿದರು.

ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಮಾತನಾಡಿ, ‘ಬೆಂಗಳೂರು–ಮುಂಬೈ ಹೊಸ ರೈಲು ಆರಂಭವಾಗಿರುವುದರಿಂದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಅಲ್ಲದೇ ಕರ್ನಾಟಕದ ಅಭಿವೃದ್ಧಿಗೂ ಸಹಕಾರಿಯಾಗಲಿದೆ’ ಎಂದು ಹೇಳಿದರು.

ಥಣಿಸಂದ್ರದಲ್ಲಿ ₹270 ಕೋಟಿ ವೆಚ್ಚದಲ್ಲಿ ವಂದೇ ಭಾರತ್ ಸ್ಲೀಪರ್ ನಿರ್ವಹಣಾ ಡಿಪೊ ಮತ್ತು ಎಸ್ಎಂವಿಟಿಯಲ್ಲಿ ₹52.73 ಕೋಟಿ ವೆಚ್ಚದಲ್ಲಿ ಚೇರ್ ಕಾರ್ ನಿರ್ವಹಣಾ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.