ಬೆಂಗಳೂರು: ‘ಪ್ರಸ್ತುತ ಹಾಗೂ ಭವಿಷ್ಯದಲ್ಲಿ ಬಾಹ್ಯಾಕಾಶ ಹವಾಮಾನ ಮುನ್ಸೂಚನೆ ಕೂಡ ಒಂದು ಸೇವೆಯಾಗಲಿದೆ’ ಎಂದು ಇಸ್ರೊ ನಿವೃತ್ತ ವಿಜ್ಞಾನಿ ವೆಂಕಟರಾವ್ ತಿಳಿಸಿದರು.

ಬಸವನಗುಡಿ ನ್ಯಾಷನಲ್ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಬೆಂಗಳೂರು ವಿಜ್ಞಾನ ವೇದಿಕೆ ಮತ್ತು ಕರ್ನಾಟಕ ಜ್ಞಾನವಿಜ್ಞಾನ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ ‘ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಭಾರತ, ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಸ್ವಾವಲಂಬಿಯಾಗಿದೆ. 34 ರಾಷ್ಟ್ರಗಳ 342 ಉಪಗ್ರಹಗಳನ್ನು ಉಡಾಯಿಸುವ ಮೂಲಕ ಇಸ್ರೊ ದೇಶಕ್ಕೆ ಆರ್ಥಿಕ ನೆರವನ್ನೂ ತಂದುಕೊಟ್ಟಿದೆ’ ಎಂದರು.

ಇದೇ ವೇಳೆ ವಿವಿಧ ರೀತಿಯ ಕೃತಕ ಉಪಗ್ರಹಗಳು, ಅವುಗಳ ಉಪಯೋಗ, ಉಡ್ಡಯನ ವಾಹನಗಳು, ರಾಕೆಟ್‌ಗಳ ಕುರಿತು ವಿವರಿಸಿ, ವಿದ್ಯಾರ್ಥಿಗಳಲ್ಲಿ ಕುತೂಹಲ ಮೂಡಿಸಿದರು.

ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ(ಕೆಜೆವಿಎಸ್) ಕಾರ್ಯದರ್ಶಿ ಈ. ಬಸವರಾಜು, ‘ಚಂದ್ರಯಾನ-3ರ ಇಸ್ರೊ ಸಾಧನೆಯ ಗುರುತಿಗಾಗಿ ದೇಶದಾದ್ಯಂತ ಈ ವರ್ಷದಿಂದ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಲಾಗುತ್ತಿದೆ’ ಎಂದು ತಿಳಿಸಿದರು.

ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ನಾ. ಶ್ರೀಧರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.