ಬೆಂಗಳೂರು: ಕೈಗಾರಿಕಾ ವಲಯದಲ್ಲಿ ಪರಸ್ಪರ ಸಹಕಾರ ಹೊಂದುವ ನಿಟ್ಟಿನಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕಿರ್ಗಿಸ್ತಾನ್ ಗಣರಾಜ್ಯದ ಆರ್ಥಿಕ ಮತ್ತು ವಾಣಿಜ್ಯ ಸಚಿವ ಬಕಿತ್ ಸಿಡಿಕೋವ್ ಅವರೊಂದಿಗೆ ಬಿಷ್ಕೇಕ್ನಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಆರ್ಥಿಕವಾಗಿ ತೊಡಗಿಸಿಕೊಳ್ಳುವಿಕೆ, ಕೈಗಾರಿಕಾ ಸಹಕಾರ ಮತ್ತು ವ್ಯಾಪಾರ ಪಾಲುದಾರಿಕೆಯನ್ನು ಗಟ್ಟಿಗೊಳಿಸುವ ಮಾರ್ಗಗಳ ಬಗ್ಗೆ ಉಭಯ ದೇಶಗಳ ನಾಯಕರು ಚರ್ಚಿಸಿದರು. ಸಚಿವ ಕುಮಾರಸ್ವಾಮಿ ಅವರೊಂದಿಗೆ ಕಿರ್ಗಿಸ್ತಾನ್ ಗಣರಾಜ್ಯದಲ್ಲಿನ ಭಾರತದ ರಾಯಭಾರಿ ಬೀರೇಂದರ್ ಸಿಂಗ್ ಯಾದವ್ ಕೂಡ ಭಾಗಿಯಾಗಿದ್ದರು.

ಯುರೇಷಿಯಾ (ಏಷ್ಯಾ-ಯುರೋಪ್) ಭಾಗದಲ್ಲಿ ಪ್ರಾದೇಶಿಕ ಸಹಕಾರ, ಆರ್ಥಿಕ ಒಗ್ಗೂಡುವಿಕೆ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ನಿರಂತರವಾಗಿ ಪ್ರತಿಪಾದಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ಶಾಂಘೈ ಸಹಕಾರ ಸಂಸ್ಥೆ (ಎಸ್ಸಿಒ) ಸದಸ್ಯ ರಾಷ್ಟ್ರಗಳೊಂದಿಗೆ ತನ್ನ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುತ್ತಿರುವುದರಿಂದ ಈ ಸಭೆ ಮಹತ್ವದ್ದಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಭದ್ರತೆ, ಆರ್ಥಿಕ ಅಭಿವೃದ್ಧಿ, ಸಂಪರ್ಕ, ಏಕತೆ, ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಗೌರವ ಮತ್ತು ಪರಿಸರ ಸಂರಕ್ಷಣೆಯನ್ನು ಒಳಗೊಂಡ ‘ಸುರಕ್ಷಿತ ಶಾಂಘೈ ಸಹಕಾರ ಸಂಸ್ಥೆಯ’ ಅಗತ್ಯತೆ ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನವಾಗಿದೆ ಎಂದು ಹೇಳಿದರು.

ಮೇಕ್ ಇನ್ ಇಂಡಿಯಾ, ಸ್ಟಾರ್ಟ್-ಅಪ್ ಇಂಡಿಯಾ, ಪಿಎಂ ಗತಿಶಕ್ತಿ ಮತ್ತು ಉತ್ಪಾದನೆ ಸಂಬಂಧಿತ ಪ್ರೋತ್ಸಾಹಕ (ಪಿಎಲ್ಐ) ಯೋಜನೆಗಳಂತಹ ಪ್ರಮುಖ ಉಪಕ್ರಮಗಳ ಬಗ್ಗೆ ಶಾಂಘೈ ಸಹಕಾರ ಸಂಸ್ಥೆ ವೇದಿಕೆಗಳಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಪ್ರಸ್ತಾಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-4-1055704816

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.