ಗುರುವಾರ , ಸೆಪ್ಟೆಂಬರ್ 23, 2021
22 °C

‘ಭಾರತ ನ್ಯಾನೊ ತಂತ್ರಜ್ಞಾನದ ತೊಟ್ಟಿಲು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೊಮ್ಮನಹಳ್ಳಿ: ‘ನ್ಯಾನೊ ತಂತ್ರಜ್ಞಾನ ಕ್ಷೇತ್ರದಲ್ಲಿ ಇತ್ತೀಚಿನ ಸಂಶೋಧನೆ, ಆವಿಷ್ಕಾರಗಳು ದೇಶಕ್ಕೆ ಅಪೂರ್ವ ಅವಕಾಶಗಳನ್ನು ತೆರೆಯಲಿದ್ದು, ಇದಕ್ಕೆ ಪೂರಕವಾಗಿ ಸರ್ಕಾರ ಸ್ಪಂದಿಸಿದಲ್ಲಿ ದೇಶವು ಜಗತ್ತಿನ ನ್ಯಾನೊ ತಂತ್ರಜ್ಞಾನದ ತೊಟ್ಟಿಲು ಎನಿಸಿಕೊಳ್ಳಲಿದೆ’ ಎಂದು ದೆಹಲಿ ಐಐಟಿ ನಿರ್ದೇಶಕ ಪ್ರೊ.ರಾಮಗೋಪಾಲ್ ಹೇಳಿದರು.

ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದ ಸುಧಾರಿತ ಕಂಪ್ಯೂಟಿಂಗ್ ಮತ್ತು ಸಂವಹನ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ‘ಸಿಡಿಎಸಿ– 2019’ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಸುಧಾರಿತ ಕಂಪ್ಯೂಟಿಂಗ್ ಮತ್ತು ಸಂವಹನ ಸೊಸೈಟಿ ಕಾರ್ಯಕ್ರಮ ಆಯೋಜಿಸಿತ್ತು ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

‘ವೈದ್ಯಕೀಯ ವಲಯವನ್ನು ದೃಷ್ಟಿಯಲ್ಲಿಟ್ಟು ಮಹತ್ತರ ಸಂಶೋಧನೆಗಳು ನಡೆಯುತ್ತಿವೆ. ಹೃದಯಾಘಾತದಂತಹ ಸಂದರ್ಭದಲ್ಲಿ ನಿಧಾನಗತಿಯ ರೋಗಪತ್ತೆಯು, ಸಾವಿನ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗುತ್ತಿದೆ. ಇದಕ್ಕೆ ಸಂಬಂಧಿಸಿ ಮೊಬೈಲ್ ಗಾತ್ರವುಳ್ಳ ರೋಗ ಪತ್ತೆ ಯಂತ್ರವನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಕೇವಲ ಅರ್ಧ ಗಂಟೆಯಲ್ಲೇ ರೋಗ ಪರೀಕ್ಷೆ ಮಾಡಬಹುದಾಗಿದೆ.ಸಂಶೋಧನಾ ಕ್ಷೇತ್ರಕ್ಕೆ ಹೆಚ್ಚಿನ ಗಮನ ನೀಡಿದರೆ, ಸಮಸ್ಯೆಯನ್ನು ಸವಾಲಾಗಿ ಸ್ವೀಕರಿಸಿ ಅದ್ಭುತ ಸಾಧನೆ ಮಾಡಲು ಸಾಧ್ಯವಿದೆ’ ಎಂದು ಅಭಿಪ್ರಾಯಪಟ್ಟರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು