ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

2047ರ ವೇಳೆಗೆ ಭಾರತ ವಿಶ್ವಗುರು ಸ್ಥಾನದಲ್ಲಿ ನಿಲ್ಲಲಿದೆ: ದೀಪಕ್ ವೋಹ್ರಾ

Published 13 ಜೂನ್ 2024, 3:23 IST
Last Updated 13 ಜೂನ್ 2024, 3:23 IST
ಅಕ್ಷರ ಗಾತ್ರ

ಬೆಂಗಳೂರು: ಭಾರತವು 2047ರ ವೇಳೆಗೆ ವಿಶ್ವಗುರು ಸ್ಥಾನದಲ್ಲಿ ನಿಲ್ಲಲಿದೆ ಎಂದು ಮಾಜಿ ರಾಯಭಾರಿ ದೀಪಕ್ ವೋಹ್ರಾ ಹೇಳಿದರು.

ನಗರದ ಆಚಾರ್ಯ ಪಾಠಶಾಲಾ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ್ದ ‘ವಿಕಸಿತ ಭಾರತ -2047’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿ ಸಮುದಾಯ ಭಾರತದ ಇತಿಹಾಸ, ಪರಂಪರೆ, ಸಂಸ್ಕೃತಿ, ಸನಾತನ ಧರ್ಮದ ಬಗ್ಗೆ ತಿಳಿವಳಿಕೆ ಹೊಂದಿರಬೇಕು. ಪ್ರಸ್ತುತ ಭಾರತ ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ, ವೈದ್ಯಕೀಯ, ಸೇನೆ ಒಳಗೊಂಡಂತೆ ಎಲ್ಲ ಕ್ಷೇತ್ರಗಳಲ್ಲಿ ಉತ್ಕೃಷ್ಟ ಸ್ಥಾನದಲ್ಲಿದೆ. ಪ್ರಗತಿಯ ಚಿತ್ರಣದಿಂದಾಗಿ ಭಾರತ ಕುರಿತಾದ ಪರಿಕಲ್ಪನೆ ಬದಲಾಗಿದೆ’ ಎಂದರು.

ಎಪಿಎಸ್ ಸಂಸ್ಥೆಯ ಅಧ್ಯಕ್ಷ ವಿಷ್ಣು ಭರತ್ ಅಲ್ಲಪಲ್ಲಿ, ಪ್ರಧಾನಮಂತ್ರಿಯವರ ಸಲಹೆಗಾರರಾದ ಆರ್.ಟಿ.ಎನ್. ಉದಯಕುಮಾರ್,  ಭಾಸ್ಕರ್, ಎ. ಪ್ರಕಾಶ್, ಎ.ಎಸ್. ಶ್ರೀಕಾಂತ್ ಉಪಸ್ಥಿತರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT