ಬೆಂಗಳೂರು: ದಿ ಮಿಥಿಕ್ ಸೊಸೈಟಿ, ಭಾರತೀಯ ಕಲಾ ಇತಿಹಾಸ ಕಾಂಗ್ರೆಸ್ (ಗುವಾಹಟಿ) ಮತ್ತು ಭಾರತೀಯ ಇತಿಹಾಸ ಸಂಶೋಧನಾ ಪರಿಷತ್ತು ಇದೇ 7ರಿಂದ 9ರವರೆಗೆ ಮಾಗಡಿ ರಸ್ತೆಯ ಜನಸೇವಾ ವಿದ್ಯಾಕೇಂದ್ರದಲ್ಲಿ ಭಾರತೀಯ ಕಲಾ ಇತಿಹಾಸದ 33ನೇ ಅಧಿವೇಶನ ಹಮ್ಮಿಕೊಂಡಿವೆ.

ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿ ಮಿಥಿಕ್ ಸೊಸೈಟಿಯ ಗೌರವ ಕಾರ್ಯದರ್ಶಿ ಎಸ್. ರವಿ, ‘ಕಲೆಯನ್ನು ಮುಖ್ಯ ವಿಷಯವಾಗಿ ಇಟ್ಟುಕೊಂಡು ದೇಶದಾದ್ಯಂತ ಆಯೋಜಿಸುವ ವಾರ್ಷಿಕ ಸಮ್ಮೇಳನಗಳಲ್ಲಿ ವಿದ್ವಾಂಸರು ಸಂಶೋಧನಾ ಪ್ರಬಂಧಗಳನ್ನು ಮಂಡಿಸುತ್ತಾರೆ’ ಎಂದು ವಿವರಿಸಿದರು.

‘ಫೆ. 7ರಂದು ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ವಿಶ್ರಾಂತ ಕುಲಪತಿ ಜಿ.ಬಿ. ದೆಗ್ಳೊರ್ಕರ್ ಅವರು ಅತಿಥಿಗಳಾಗಿ ಭಾಗವಹಿಸಲಿದ್ದು, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷ ವಿ. ನಾಗರಾಜ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಫೆ. 9ರಂದು ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಭಾರತೀಯ ಕಲಾ ಇತಿಹಾಸ ಕಾಂಗ್ರೆಸ್ನ ಅಧ್ಯಕ್ಷ ಮಾರುತಿ ನಂದನ್ ಪ್ರಸಾದ್ ತಿವಾರಿ ವಹಿಸಲಿದ್ದು, ವಿದ್ವಾಂಸ ಶತಾವಧಾನಿ ಆರ್. ಗಣೇಶ್ ಸಮಾರೋಪ ಭಾಷಣ ಮಾಡಲಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.