ಬೆಂಗಳೂರು: ಕಾಶ್ಮೀರದ ಪುಲ್ವಾಮದಲ್ಲಿ ಕಳೆದ ವರ್ಷ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧ ಎಚ್.ಗುರು ಸ್ಮಾರಕ ನಿರ್ಮಾಣಕ್ಕೆ ಮಂಡ್ಯ ಜಿಲ್ಲಾಧಿಕಾರಿಗೆ ₹25 ಲಕ್ಷ ಬಿಡುಗಡೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಗುಡಿಗೆರೆ ಗ್ರಾಮದ ಯೋಧ ಗುರು 2019ರ ಫೆಬ್ರುವರಿ 14ರಂದು ಹುತಾತ್ಮರಾಗಿದ್ದರು. ಘಟನೆ ನಡೆದು ವರ್ಷ ಕಳೆದರೂ ಇನ್ನೂ ಸ್ಮಾರಕ ನಿರ್ಮಾಣ ಮಾಡದಿರುವ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಹಣ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಯೋಧನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಅಂದಿನ ಸಚಿವ ಡಿ.ಸಿ.ತಮ್ಮಣ್ಣ ಅವರು ವರ್ಷದಲ್ಲಿ ಸ್ಮಾರಕ ನಿರ್ಮಾಣ ಮಾಡ
ಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ ಈವರೆಗೂ ಆ ಕೆಲಸ ನೆರವೇರಿರಲಿಲ್ಲ.

ಬಿಜೆಪಿ ಹಿರಿಯ ಮುಖಂಡ ಎಸ್.ಎಂ.ಕೃಷ್ಣ ಅವರು ಯಡಿಯೂರಪ್ಪ ಅವರಿಗೆ ಪತ್ರ ಬರೆದು ‘ಸ್ಮಾರಕ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು. ಅಸ್ಥಿ ವಿಸರ್ಜನೆಗೆ ವ್ಯವಸ್ಥೆ ಮಾಡಿಸಬೇಕು’ ಎಂದು ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಣ ಬಿಡುಗಡೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.