ಬೆಂಗಳೂರು: ‘ಜಾತ್ಯತೀತ ವ್ಯವಸ್ಥೆಯಲ್ಲಿ ನಾವಿದ್ದೇವೆ. ನಾಡಹಬ್ಬ ದಸರಾವನ್ನು ಸಾಹಿತಿ ಬಾನು ಮುಷ್ತಾಕ್ ಉದ್ಘಾಟಿಸಬಾರದು ಎಂದು ಹೇಳುವುದರಲ್ಲಿ ಅರ್ಥವಿಲ್ಲ. ಸಂಸದರಾಗಿದ್ದವರಿಗೆ ಸಂವಿಧಾನ ಗೊತ್ತಿಲ್ಲ ಎಂದರೆ ಅಂಥ ಮೂರ್ಖರ ಬಗ್ಗೆ ಎಚ್ಚರದಿಂದ ಇರಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸೋಮವಾರ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿದ ಅವರು, ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಹೆಸರು ಎತ್ತದೇ ಟೀಕಿಸಿದರು.

ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದ ಬಳಿಕವೂ ಪಟ್ಟಭದ್ರ ಹಿತಾಸಕ್ತಿಗಳು ಮತಾಂಧರಂತೆ ವರ್ತಿಸಿ ಸಮಾಜವನ್ನು ದಿಕ್ಕುತಪ್ಪಿಸುತ್ತಿವೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದ್ದಾರೆ. ಸಹಬಾಳ್ವೆ, ಸಹಿಷ್ಣುತೆ ಬಗ್ಗೆ ಗೊತ್ತಿರುವವರೇ ದಾರಿ ತಪ್ಪಿಸುತ್ತಿದ್ದಾರೆ. ರಾಜಕೀಯ ಮಾಡಲಿ ಆದರೆ, ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡಬಾರದು ಎಂದು ತಿಳಿಸಿದರು.

‘ಬಾನು ಮುಷ್ತಾಕ್ ಅವರನ್ನು ದಸರಾಕ್ಕೆ ಆಹ್ವಾನಿಸಿರುವುದು ಸರ್ಕಾರದ ತೀರ್ಮಾನ. ಅದರ ವಿರುದ್ಧ ಪ್ರತಾಪ ಸಿಂಹ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಪೀಠದಿಂದ ನ್ಯಾಯ ಸಿಕ್ಕಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಮ್ಮ ಸಂವಿಧಾನದಲ್ಲಿ ಎಲ್ಲ ಧರ್ಮಗಳಿಗೂ ಅವಕಾಶ ಕಲ್ಪಿಸಲಾಗಿದೆ. ಚಾಮುಂಡೇಶ್ವರಿ ದೇವಿಗೆ ಪ್ರಾರ್ಥಿಸಬೇಡಿ, ಚಾಮುಂಡಿ ಬೆಟ್ಟಕ್ಕೆ ಬರಬೇಡಿ ಎಂದು ಹೇಳಲು ಹೇಗೆ ಸಾಧ್ಯ? ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿ ನಾಯಕರು ಸಂವಿಧಾನವನ್ನು ಸರಿಯಾಗಿ ಓದಲಿ. ಆಗ ನಿಮ್ಮ ಹಕ್ಕು ಏನಿದೆ ಎಂಬುದು ಅರ್ಥವಾಗುತ್ತದೆ. ಬಿಜೆಪಿಗರಿಗೆ ಸಂವಿಧಾನದ ಮೇಲೆ ಗೌರವವಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.