ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನ ಎರಡು ಬೋಗಿಗಳಲ್ಲಿ ಬೆಂಕಿ ಹತ್ತಿಕೊಂಡಿದ್ದು, ಅಗ್ನಿಶಾಮಕ ದಳ ಬಂದು ಬೆಂಕಿ ನಂದಿಸಿದೆ. ಪ್ರಯಾಣಿಕರು ಇರದಿದ್ದ ಕಾರಣ ಯಾವುದೇ ಅಪಾಯ ಉಂಟಾಗಿಲ್ಲ. ಮುಂಬೈಯ ಛತ್ರಪತಿ ಶಿವಾಜಿ ಟರ್ಮಿನಲ್‌ನಿಂದ ಹೊರಟಿದ್ದ ಉದ್ಯಾನ್ ಎಕ್ಸ್‌ಪ್ರೆಸ್ ರೈಲು ಕೆಎಸ್‌ಆರ್ ನಿಲ್ದಾಣದ ಪ್ಲಾಟ್‌ಫಾರ್ಮ್ 3ಕ್ಕೆ ಶನಿವಾರ ಬೆಳಿಗ್ಗೆ 5.45ಕ್ಕೆ ತಲುಪಿತ್ತು. ಪ್ರಯಾಣಿಕರು ಇಳಿದು ಹೋಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.