ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಆಫ್ರಿಕಾಕ್ಕೆ 1 ಲಕ್ಷ ಭಾರತೀಯ ಪ್ರವಾಸಿಗರ ಭೇಟಿ ನಿರೀಕ್ಷೆ

Published 16 ಫೆಬ್ರುವರಿ 2024, 10:40 IST
Last Updated 16 ಫೆಬ್ರುವರಿ 2024, 10:40 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಪೂರ್ವದಲ್ಲಿ ದಕ್ಷಿಣ ಆಫ್ರಿಕಾಕ್ಕೆ ಭಾರತೀಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿದ್ದರು. ಪ್ರಸಕ್ತ ವರ್ಷದಲ್ಲಿ ಒಂದು ಲಕ್ಷ ಭಾರತೀಯರ ಭೇಟಿಯನ್ನು ನಿರೀಕ್ಷಿಸಲಾಗಿದೆ ಎಂದು ದಕ್ಷಿಣ ಆಫ್ರಿಕಾ ಪ್ರವಾಸೋದ್ಯಮದ ಮಧ್ಯಪೂರ್ವ, ಭಾರತ ಮತ್ತು ಆಗ್ನೇಯ ಏಷ್ಯಾ ವಿಭಾಗದ ಮುಖ್ಯಸ್ಥೆ ನೆಲಿಸ್ವಾ ನ್ಕಾನಿ ಹೇಳಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2023ರಲ್ಲಿ 79 ಸಾವಿರ ಭಾರತೀಯ ಪ್ರವಾಸಿಗರು ಭೇಟಿ ನೀಡಿದ್ದಾರೆ. 2022ನೇ ಸಾಲಿಗೆ ಹೋಲಿಸಿದರೆ ಪ್ರವಾಸಿಗರ ಭೇಟಿಯಲ್ಲಿ ಶೇ 43ರಷ್ಟು ಏರಿಕೆಯಾಗಿದೆ ಎಂದು ವಿವರಿಸಿದರು.

ದಕ್ಷಿಣ ಆಫ್ರಿಕಾಕ್ಕೆ ಭೇಟಿ ನೀಡುವ ವಿದೇಶಿ ಪ್ರವಾಸಿಗರ ಪೈಕಿ ಭಾರತವು ಆರನೇ ಅತಿದೊಡ್ಡ ರಾಷ್ಟ್ರವಾಗಿದೆ. ಅಮೆರಿಕ ಮತ್ತು ನೆದರ್ಲೆಂಡ್‌ ಆ ನಂತರದ ಸ್ಥಾನದಲ್ಲಿವೆ. ವೀಸಾ ಸಮಸ್ಯೆ ಸುಧಾರಣೆಗೆ ಕ್ರಮವಹಿಸಲಾಗಿದೆ. ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಇ–ವೀಸಾ ಸಂಖ್ಯೆ ಹೆಚ್ಚಳಕ್ಕೆ ಉಭಯ ದೇಶಗಳು ಕಾರ್ಯತತ್ಪರವಾಗಿವೆ ಎಂದು ತಿಳಿಸಿದರು. 

ಬೆಂಗಳೂರು ನಗರವು ದಕ್ಷಿಣ ಆಫ್ರಿಕಾ ಪ್ರವಾಸೋದ್ಯಮದ ಪ್ರಮುಖ ಮಾರುಕಟ್ಟೆಗಳಲ್ಲಿ ಒಂದಾಗಿದೆ. ವರ್ಷದಿಂದ ವರ್ಷಕ್ಕೆ ಇಲ್ಲಿಂದ ಬರುವ ಪ್ರವಾಸಿಗರ ಸಂಖ್ಯೆ ಶೇ 80ರಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT