ಬೆಂಗಳೂರು: ಬೆಂಗಳೂರಿನಿಂದ ಚೆನ್ನೈಗೆ ಹೊರಟಿದ್ದ ಇಂಡಿಗೊ ವಿಮಾನದಲ್ಲಿ ಮಂಗಳವಾರ ಸಂಜೆ ಹೊಗೆ ಕಾಣಿಸಿಕೊಂಡಿದ್ದು, ಅದರಲ್ಲಿದ್ದ 230ಕ್ಕೂ ಹೆಚ್ಚು ಪ್ರಯಾಣಿಕರನ್ನು ಎಮರ್ಜೆನ್ಸಿ ಬಾಗಿಲಿನ ಮೂಲಕ ಸ್ಥಳಾಂತರ ಮಾಡಲಾಗಿದೆ.

‘6ಇ 6017 ವಿಮಾನವು ರನ್ವೇ ಕಡೆಗೆ ಚಲಿಸುತ್ತಿದ್ದಾಗ ವಿಮಾನದೊಳಗೆ ಹೊಗೆ ಕಾಣಿಸಿಕೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ತಕ್ಷಣವೇ ಎಲ್ಲರನ್ನೂ ಹೊರಗೆ ಕಳುಹಿಸಲಾಯಿತು. ವಿಮಾನದಲ್ಲಿದ್ದ ಯಾರಿಗೂ ಯಾವುದೇ ಗಾಯಗಳಾಗಿಲ್ಲ’ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

‘ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರತರಲಾಗಿದ್ದು, ಅವರನ್ನು ಟರ್ಮಿನಲ್ಗೆ ಸ್ಥಳಾಂತರಿಸಿ ಅಲ್ಲಿ ಅಗತ್ಯ ನೆರವು ನೀಡಲಾಗಿದೆ. ಬೇರೊಂದು ವಿಮಾನದಲ್ಲಿ ಗಮ್ಯ ಸ್ಥಾನಕ್ಕೆ ಕರೆದೊಯ್ಯಲಾಗಿದೆ’ ಎಂದು ಹೇಳಿದ್ದಾರೆ.

ಹೊಗೆ ಕಾಣಿಸಿಕೊಳ್ಳಲು ನಿಖರವಾದ ಕಾರಣ ತಕ್ಷಣವೇ ತಿಳಿದುಬಂದಿಲ್ಲ. ಹೊಗೆಯ ಮೂಲವನ್ನು ಪತ್ತೆಹಚ್ಚಲು ವಿಮಾನ ನಿಲ್ದಾಣ ಮತ್ತು ವಿಮಾನಯಾನ ಸಂಸ್ಥೆಯ ಅಧಿಕಾರಿಗಳು ವಿಮಾನವನ್ನು ಪರಿಶೀಲಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.