ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಧಾನಿಯ ಎಲ್ಲೆಡೆ ಸ್ವಾತಂತ್ರ್ಯ ಸಂಭ್ರಮಕ್ಕೆ ಸಾಂಸ್ಕೃತಿಕ ಮೆರುಗು

ಮನೆ ಮನೆಗಳ ಮೇಲೂ ತ್ರಿವರ್ಣ ಧ್ವಜ ಹಾರಾಟ, ದೀಪಾಲಂಕಾರದಿಂದ ಕಂಗೊಳಿಸಿದ ಕಟ್ಟಡಗಳು
Published 15 ಆಗಸ್ಟ್ 2023, 16:03 IST
Last Updated 15 ಆಗಸ್ಟ್ 2023, 16:03 IST
ಅಕ್ಷರ ಗಾತ್ರ

ಬೆಂಗಳೂರು: ರಾಜಧಾನಿಯ ಎಲ್ಲೆಡೆ ಮಂಗಳವಾರ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವು ಮೇಳೈಸಿತ್ತು. ಸಂಘ–ಸಂಸ್ಥೆಗಳು, ಸರ್ಕಾರಿ ಕಚೇರಿಗಳು, ಶಾಲಾ–ಕಾಲೇಜುಗಳ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಮನೆಗಳು ಹಾಗೂ ಅಪಾರ್ಟ್‌ಮೆಂಟ್‌ಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಿ, ದೇಶಪ್ರೇಮ ಮೆರೆಯಲಾಯಿತು.

ಮಂಗಳವಾರ ಬಿಸಿಲಿನ ವಾತಾವರಣ ಇದ್ದುದ್ದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳೂ ಈ ಬಾರಿ ವಿಜೃಂಭಣೆಯಿಂದ ನೆರವೇರಿದವು. ಶಾಲಾ ಮಕ್ಕಳು ಕೈಗೆ ಬ್ಯಾಂಡ್‌ ಹಾಗೂ ತ್ರಿವರ್ಣ ವಸ್ತ್ರಧರಿಸಿ ಮೆರುಗು ತುಂಬಿದರು.

ಪೊಲೀಸ್ ಕಮಿಷನರ್ ಕಚೇರಿ: ಇನ್ಫೆಂಟ್ರಿ ರಸ್ತೆಯ ಪೊಲೀಸ್ ಕಮಿಷನರೇಟ್‌ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಪೊಲೀಸ್‌ ಕಮಿಷನರ್ ಬಿ. ದಯಾನಂದ್ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಸಂಗೀತ ವಾದ್ಯ ಮೇಳದವರು, ರಾಷ್ಟ್ರಗೀತೆ ಪ್ರಸ್ತುತಪಡಿಸಿದರು.

ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ–ಐಜಿಪಿ) ಅಲೋಕ್‌ ಮೋಹನ್ ಧ್ವಜಾರೋಹರಣ ನೆರವೇರಿಸಿದರು.

ಎ‍ಪಿಎಸ್ ಶಿಕ್ಷಣ ದತ್ತಿಯ 11 ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಕಂಡುಬಂತು. ಅಂದಾಜು ಎರಡು ಸಾವಿರ ಮಕ್ಕಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಗದಗ, ವಿಜಯಪುರದ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ನಿರ್ಭಯಾನಂದ ಸರಸ್ವತಿ ಜೀ ಅವರು ಧ್ವಜಾರೋಹಣ ನೆರವೇರಿಸಿ ಪಥಸಂಚಲನಕ್ಕೆ ಚಾಲನೆ ನೀಡಿದರು. ಎಪಿಎಸ್‌ ಎಜುಕೇಶನ್‌ ಟ್ರಸ್ಟ್‌ ಅಧ್ಯಕ್ಷ ಸಿ.ಎ.ವಿಷ್ಣುಭರತ್‌ ಅಲಂಪಲ್ಲಿ ಹಾಜರಿದ್ದರು.

ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಕಸಾಪ ಅಧ್ಯಕ್ಷ ಮಹೇಶ ಜೋಶಿ ಮಾತನಾಡಿ, ‘ಅನೇಕ ಸ್ವಾತಂತ್ರ ಹೋರಾಟಗಾರರು ತಮ್ಮ ಯೌವನದ ದಿನಗಳನ್ನು ಕತ್ತಲೆಯಲ್ಲಿ ಕಳೆದರು. ನಾಡಿಗೆ ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಯ ಫಲವಾಗಿ ಸ್ವಾತಂತ್ರ್ಯವನ್ನು ನಾವು ಇಂದು ಅನುಭವಿಸುತ್ತಿದ್ದೇವೆ’ ಎಂದರು.

ನಗರದ ಹಳೆ ವಿಮಾನ ನಿಲ್ದಾಣ ರಸ್ತೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಾಂಸ್ಕೃತಿಕ ಸಂಭ್ರಮ ನಡೆಯಿತು.

ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕುಲಪತಿ ಲಿಂಗರಾಜ ಗಾಂಧಿ, ‘ಭಾರತವು ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವದ ರಾಷ್ಟ್ರ. ವಿವಿಧತೆಯಲ್ಲಿ ಏಕತೆಯನ್ನು ಒಳಗೊಂಡ ರಾಷ್ಟ್ರವಾಗಿದೆ. ಭಾರತವು ಯುವಶಕ್ತಿಯನ್ನು ಒಳಗೊಂಡ ರಾಷ್ಟ್ರವಾಗಿದೆ’ ಎಂದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದ ಬಳಿ ನಡೆದ ಸಮಾರಂಭದಲ್ಲಿ ಶಾಸಕ ಬಸವರಾಜ ಬೊಮ್ಮಾಯಿ ಬಿಜೆಪಿ ಮುಖಂಡ ಗೋವಿಂದ ಕಾರಜೋಳ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ರಾಜ್ಯ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್‌ ಇದ್ದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದ ಬಳಿ ನಡೆದ ಸಮಾರಂಭದಲ್ಲಿ ಶಾಸಕ ಬಸವರಾಜ ಬೊಮ್ಮಾಯಿ ಬಿಜೆಪಿ ಮುಖಂಡ ಗೋವಿಂದ ಕಾರಜೋಳ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ರಾಜ್ಯ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್‌ ಇದ್ದರು.
ಎ‍ಪಿಎಸ್ ಶಿಕ್ಷಣ ದತ್ತಿಯ 11 ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ಗದಗ ಹಾಗೂ ವಿಜಯಪುರದ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ನಿರ್ಭಯಾನಂದ ಸರಸ್ವತಿ ಜೀ ಅವರು ಮಹನೀಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಎ‍ಪಿಎಸ್ ಶಿಕ್ಷಣ ದತ್ತಿಯ 11 ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ಗದಗ ಹಾಗೂ ವಿಜಯಪುರದ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ನಿರ್ಭಯಾನಂದ ಸರಸ್ವತಿ ಜೀ ಅವರು ಮಹನೀಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಸಶಕ್ತ ರಾಷ್ಟ್ರ 2047ರ ವೇಳೆಗೆ ದೇಶವು ವಿಶ್ವದ ಅತ್ಯಂತ ಸಶಕ್ತ ರಾಷ್ಟ್ರವಾಗಿ ಹೊರಹೊಮ್ಮಲಿದೆ

ಪ್ರಧಾನಿ ನರೇಂದ್ರ ಮೋದಿ ಹೇಳಿದಂತೆ ದೇಶದಲ್ಲಿ ಅಮೃತಕಾಲ ಆರಂಭವಾಗಿದೆ. ಸಂಕಲ್ಪ ಮತ್ತು ಛಲದೊಂದಿಗೆ ನಾವು ನಮ್ಮ ದೇಶವನ್ನು ಮುನ್ನಡೆಸಬೇಕಿದೆ. – ಬಸವರಾಜ ಬೊಮ್ಮಾಯಿ ಶಾಸಕ ( ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು) ‘ಜತನದಿಂದ ಕಾಪಾಡಿಕೊಳ್ಳೋಣ’ ಕರ್ನಾಟಕದ ಮೂಲಕ ಭಾರತವನ್ನು ನೋಡೋಣ. ಪಂಚಭೂತಗಳ ಸಮತತ್ತ್ವ ಎಷ್ಟು ಆದರ್ಶಪ್ರಾಯವೋ ಭಾರತೀಯ ಸ್ವಾತಂತ್ರ್ಯದ ಪರಿಕಲ್ಪನೆ ಅಷ್ಟೇ ಶ್ರೇಷ್ಠ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಸೇರಿದಂತೆ ಅನೇಕ ಮಹಾಪುರುಷರ ತ್ಯಾಗ ಬಲಿದಾನದ ಮಹಾಫಲವನ್ನು ಜತನದಿಂದ ಕಾಪಾಡಿಕೊಳ್ಳೋಣ. – ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ

‘ಮುಂಚೂಣಿಯಲ್ಲಿ ಭಾರತ’

‘ದೇಶಕ್ಕೆ ಸ್ವಾತಂತ್ರ್ಯ ಸುಮ್ಮನೆ ಬಂದಿಲ್ಲ. ಲಕ್ಷಾಂತರ ಭಾರತೀಯರ ಅಮೂಲ್ಯ ಜೀವ ಬಲಿದಾನದ ಫಲವಾಗಿದೆ. ಸ್ವಾತಂತ್ರ್ಯ ಯೋಧರ ಆತ್ಮಕ್ಕೆ ಶಾಂತಿ ಕೋರುವುದರ ಜೊತೆಗೆ ಅವರ ಕುಟುಂಬಕ್ಕೆ ನಾವು ಸದಾ ಚಿರಋಣಿಯಾಗಿ ಇರಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ವಿಧಾನಸೌಧ ಪೂರ್ವಭಾಗದ ಮೆಟ್ಟಿಲುಗಳ ಎದುರು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ ‘77 ವರ್ಷಗಳಿಂದ ಭಾರತ ಸಾಕಷ್ಟು ಅಭಿವೃದ್ಧಿ ಕಂಡಿದೆ. ಬಲಿಷ್ಠ ರಾಷ್ಟ್ರವಾಗಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ವಿಶ್ವಗುರು ಆಗುವಲ್ಲಿ ದಾಪುಗಾಲು ಇಡುತ್ತಿರುವುದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಸಂಗತಿ’ ಎಂದರು. ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ವಿಧಾನ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮಿ ವಿಧಾನಸಭಾ ಕಾರ್ಯದರ್ಶಿ ವಿಶಾಲಾಕ್ಷಿ ವಿಧಾನ ಪರಿಷತ್ತಿನ ಹೆಚ್ಚುವರಿ ಕಾರ್ಯದರ್ಶಿ ಎಸ್.ನಿರ್ಮಲಾ ಸಭಾಪತಿಗಳ ಆಪ್ತ ಕಾರ್ಯದರ್ಶಿ ಕೆ.ಡಿ.ಶೈಲಾ ಇದ್ದರು.

‘ಹೈಕೋರ್ಟ್‌ನಲ್ಲಿ 2.72 ಲಕ್ಷ ಪ್ರಕರಣ ಬಾಕಿ’

‘ಹೈಕೋರ್ಟ್‌ನಲ್ಲಿ 272041 ಪ್ರಕರಣಗಳು ಬಾಕಿಯಿದ್ದು ಇವುಗಳನ್ನು‌ ಶೀಘ್ರವೇ ವಿಲೇವಾರಿ ಮಾಡಬೇಕು’ ಎಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಸೂಚಿಸಿದರು. ಹೈಕೋರ್ಟ್‌ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು. ಕಾನೂನಿನ ಮುಂದೆ ಎಲ್ಲರೂ ಸಮಾನರು’ ಎಂದರು. ‘ಕಾನೂನಿನ ಮುಂದೆ ವ್ಯಕ್ತಿಯ ಸಾಮಾಜಿಕ ಆರ್ಥಿಕ ಅರ್ಹತೆ ಯಾವುದೇ ಪ್ರಭಾವ ಬೀರುವುದಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ನ್ಯಾಯಾಂಗ ವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸಲು ನಾಯಾಧೀಶರು ಹಾಗೂ ವಕೀಲರು ಶ್ರಮಿಸಬೇಕು’ ಎಂದು ಕರೆ ನೀಡಿದರು. ಹೆಚ್ಚುವರಿ ಸಾಲಿಸಿಟರ್ ಜನರಲ್ ಶಾಂತಿಭೂಷಣ್ ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಜಿ.ರವಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT