ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ ಕೇಸು ದಾಖಲಿಸುವ ಬೆದರಿಕೆ ಹಾಕಿದ್ದ ಮಹಿಳೆ ವಿರುದ್ಧ ಎನ್‌ಸಿಆರ್

Last Updated 7 ಸೆಪ್ಟೆಂಬರ್ 2020, 19:18 IST
ಅಕ್ಷರ ಗಾತ್ರ

ಬೆಂಗಳೂರು: ‘ಸಾಲ ವಾಪಸು ಕೇಳಿದರೆ ಅತ್ಯಾಚಾರದ ಪ್ರಕರಣ ದಾಖಲಿಸುತ್ತೇನೆ’ ಎಂದು ಮಹಿಳೆಯೊಬ್ಬರು ಬ್ಯಾಂಕ್‌ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಸಂಬಂಧ ಎನ್‌ಸಿಆರ್‌ (ಗಂಭೀರವಲ್ಲದ ಅಪರಾಧ) ದಾಖಲಾಗಿದೆ.

ಸಾಲ ವಸೂಲಿ ಮಾಡಲು ಬ್ಯಾಂಕ್‌ ಅಧಿಕಾರಿಗಳು ಮನೆಗೆ ಬಂದಿದ್ದ ವೇಳೆಯಲ್ಲಿ ಇಂದಿರಾನಗರದ ಸಂಗೀತಾ ಎಂಬುವರು ಅತ್ಯಾಚಾರದ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಬ್ಯಾಂಕ್ ಅಧಿಕಾರಿಗಳು ಕಾಲಿಗೆ ಬಿದ್ದರೂ ಮಹಿಳೆ ಸುಮ್ಮನಾಗಿರಲಿಲ್ಲ. ಅಧಿಕಾರಿಗಳನ್ನೇ ತಳ್ಳಿ, ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಇದೆಲ್ಲವೂ ವಿಡಿಯೊದಲ್ಲಿ ಸೆರೆಯಾಗಿತ್ತು.

ಘಟನೆ ಬಳಿಕ ಬ್ಯಾಂಕ್ ಅಧಿಕಾರಿಗಳು ಹಾಗೂ ಮಹಿಳೆ, ಇಂದಿರಾನಗರ ಠಾಣೆ ಮೆಟ್ಟಿಲೇರಿದ್ದರು. ಪರಸ್ಪರ ಸಂಧಾನ ಮಾಡಿಕೊಂಡಿದ್ದರು.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲ್‌ ಆಗುತ್ತಿದ್ದಂತೆ ಮಹಿಳೆಯ ವರ್ತನೆಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು.

‘ವಿಡಿಯೊ ಆಧರಿಸಿ ಸಾಮಾಜಿಕ ಕಾರ್ಯಕರ್ತೆ ಪ್ರಿಯಾ ಆರ್ಯ ಎಂಬುವರು ಸಂಗೀತಾ ವಿರುದ್ದ ದೂರು ನೀಡಿದ್ದಾರೆ. ಮಹಿಳೆಯರ ಹಕ್ಕು ಹಾಗೂ ಕಾನೂನುಗಳನ್ನು ಮಹಿಳೆ ದುರ್ಬಳಕೆ ಮಾಡಿಕೊಂಡಿಕೊಂಡಿರುವುದಾಗಿ ಪ್ರಿಯಾ ದೂರಿದ್ದಾರೆ. ಅದರನ್ವಯ ಎನ್‌ಸಿಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT