ಭಾನುವಾರ, ಸೆಪ್ಟೆಂಬರ್ 19, 2021
23 °C

ದರ್ಶನ್ ಹೆಸರೇಳಿ ಜೀವ ಬೆದರಿಕೆ: ದೂರು ದಾಖಲಿಸಿದ ಇಂದ್ರಜೀತ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ನಟ ದರ್ಶನ್ ಹೆಸರು ಹೇಳಿಕೊಂಡು ಕರೆ ಮಾಡುತ್ತಿದ್ದ ಕೆಲ ರೌಡಿಗಳು, ಅಶ್ಲೀಲ ಚಿತ್ರ ಹಾಗೂ ಪದ ಬಳಸಿ ಜೀವ ಬೆದರಿಕೆಯೊಡ್ಡುತ್ತಿದ್ದಾರೆ’ ಎಂದು ಆರೋಪಿಸಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಕೋರಮಂಗಲ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ಸ್ವೀಕರಿಸಿರುವ ಪೊಲೀಸರು, ಎಫ್‌ಐಆರ್ ದಾಖಲಿಸಿಕೊಳ್ಳುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

‘ನಟ ದರ್ಶನ್ ಅವರ ಪ್ರಚೋದನೆಯಿಂದಾಗಿ ಹಿಂಬಾಲಕರು ಹಾಗೂ ಕೆಲ ರೌಡಿಗಳು, ವಾಟ್ಸ್‌ಆ್ಯಪ್ ಕರೆ ಮಾಡಿ ಬೆದರಿಸುತ್ತಿದ್ದಾರೆ. ಕೆಲವರು, ವಿಡಿಯೊ ಕರೆ ಮಾಡಿ ಅಶ್ಲೀಲವಾಗಿ ಬೈಯುತ್ತಿದ್ದಾರೆ. ಅವರನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಇಂದ್ರಜಿತ್ ದೂರಿನಲ್ಲಿ ಕೋರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು