ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಚ್‌ 31ರವರೆಗೆ ಕೈಗಾರಿಕೆ ಗಾರ್ಮೆಂಟ್ ಬಂದ್

Last Updated 23 ಮಾರ್ಚ್ 2020, 21:35 IST
ಅಕ್ಷರ ಗಾತ್ರ

ಬೆಂಗಳೂರು:ರಾಜ್ಯದ ಎಲ್ಲಾ ಸಣ್ಣ, ಅತಿ ಸಣ್ಣ, ಮಧ್ಯಮ, ಬೃಹತ್ ಕೈಗಾರಿಕೆಗಳು ಮತ್ತು ಗಾರ್ಮೆಂಟ್ ಕಾರ್ಖಾನೆಗಳನ್ನು ಮಾ.31ರವರೆಗೆ ಬಂದ್ ಮಾಡ‌ಲು ಕೈಗಾರಿಕೋದ್ಯಮಿಗಳು ನಿರ್ಧರಿಸಿದ್ದಾರೆ.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷ ಸಿ.ಆರ್. ಜನಾರ್ದನ, ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಅಧ್ಯಕ್ಷ ಆರ್.ರಾಜು, ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಎಸ್.ಅಸ್ರಣ್ಣ, ಗಾರ್ಮೆಂಟ್‌ ಕಾರ್ಖಾನೆಗಳ ಸಂಘದ ಅಧ್ಯಕ್ಷ ಪಿ.ಎಚ್.ರಾಜ್‌ಪುರೋಹಿತ್ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

‘ರಾಜ್ಯದ 6 ಲಕ್ಷ ಕೈಗಾರಿಕೆಗಳಲ್ಲಿ ದುಡಿಯುತ್ತಿರುವ 60 ಲಕ್ಷ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲು ಎಲ್ಲಾ ಕೈಗಾರಿಕೆಗಳಿಗೆ ಸೂಚನೆ ನೀಡಲಾಗಿದೆ. ಇದನ್ನು ಪಾಲಿಸದ ಕೈಗಾರಿಕೆಗಳ ವಿರುದ್ಧ ಏನು ಕ್ರಮ ಕೈಗೊಳ್ಳಬೇಕು ಎಂಬು
ದನ್ನು ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹೇಳಿದರು.

‘ಬಂದ್ ಮಾಡುವುದರಿಂದ ಆಗುವ ನಷ್ಟಕ್ಕೆ ಸರ್ಕಾರ ನೆರವು ನೀಡಬೇಕು. ವಿದ್ಯುತ್ ಶುಲ್ಕವನ್ನು ಪೂರ್ಣ ಪ್ರಮಾಣದಲ್ಲಿ ಪಡೆಯದೆ ಸ್ಥಿರ ದರ ಪಡೆಯಬೇಕು. ಸಾಲದ ಕಂತು ಪಾವತಿ ಅವಧಿ ವಿಸ್ತರಿಸಲು ಅವಕಾಶ ನೀಡಬೇಕು. ಒಂದು ವಾರದ ಬಡ್ಡಿ ದರವನ್ನು ಮನ್ನಾ ಮಾಡಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT