ಗುರುವಾರ , ಫೆಬ್ರವರಿ 20, 2020
22 °C
ನೆಲಮಂಗಲ–ಹರಿಹರ ಕೈಗಾರಿಕಾ ವಸಾಹತುಗಳ 318 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ನೂತನ ಕೈಗಾರಿಕಾ ನೀತಿ ಶೀಘ್ರ ಜಾರಿ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ರಾಜ್ಯದ ಕೈಗಾರಿಕೆಗಳ ಅಭಿವೃದ್ಧಿಗೆ ಕೈಗಾರಿಕಾ ನೀತಿ ಅಥವಾ ಕರ್ನಾಟಕ ನೀತಿ  2019-23ರ ಕರಡು ರೂಪಿಸಲಾಗಿದ್ದು, ಶೀಘ್ರದಲ್ಲೇ ಜಾರಿಗೆ ತರಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ನಗರದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೆಲಮಂಗಲ ಹಾಗೂ ಹರಿಹರ ವಸಾಹತುಗಳ ಸಣ್ಣ ಉದ್ದಿಮೆದಾರರಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದರು.

‘ಸಣ್ಣ ಕೈಗಾರಿಕೆಗಳು ಕಳೆದ ಸಾಲಿನಲ್ಲಿ ಪಾವತಿಸಬೇಕಾಗಿರುವ ಆಸ್ತಿ ತೆರಿಗೆ ಮೇಲಿನ ಬಡ್ಡಿದರವನ್ನು ಮನ್ನಾ ಮಾಡುವುದಾಗಿ ಸರ್ಕಾರ ಈಗಾಗಲೇ ಘೋಷಿಸಿದೆ. ಆದರೆ, ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಬಡ್ಡಿ ಮನ್ನಾಗೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಹೇಳಿದರು. 

‘ಸಣ್ಣ ಕೈಗಾರಿಕೆಗಳು ವಿದ್ಯುತ್‌ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕಾಗಿದ್ದಲ್ಲಿ ಎಸ್ಕಾಂಗಳಿಂದ ಸ್ವಾಧೀನಾನುಭವ ಪತ್ರ ಪಡೆದುಕೊಳ್ಳಬೇಕು. ಹಲವು ಸಣ್ಣ ಕೈಗಾರಿಕೆಗಳು ಈ ಪ್ರಮಾಣಪತ್ರ ಹೊಂದಿರದ ಕಾರಣ, ಕೈಗಾರಿಕೆಗಳ ವಿಸ್ತರಣೆಗೆ ಅಡಚಣೆಯಾಗಿದೆ. ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು’ ಎಂದರು. 

ನೆಲಮಂಗಲದ 240 ಮತ್ತು ಹರಿಹರದ 78 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು. 

ಪೋರ್ಟಲ್‌– ಕೈಟ್‌ ಚಿಹ್ನೆ ಬಿಡುಗಡೆ: ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕಾ ಉದ್ಯಮಗಳಲ್ಲಿನ ಕಚ್ಚಾ ವಸ್ತುಗಳ ಮಾರಾಟ ಮತ್ತು ವಿನಿಮಯ ಮಾಡಿಕೊಳ್ಳುವ ಉದ್ದೇಶದಿಂದ ಕಾಸಿಯಾ ರೂಪಿಸಿದ kassia.msmemall.com ವೆಬ್‌ ಪೋರ್ಟಲ್‌ ಅನಾವರಣಗೊಳಿಸಲಾಯಿತು. ಈ ಪೋರ್ಟಲ್‌ ಮೂಲಕವೇ ವಹಿವಾಟು ನಡೆಸಿದರೆ, ಉದ್ಯಮಗಳಲ್ಲಿನ ಬಳಕೆ ಮಾಡಿ ಉಳಿದಿರುವ ವಸ್ತುಗಳು ಕಡಿಮೆ ಬೆಲೆಗೆ ಸಿಗಲಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು