ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ಬೆಂಕಿ ಅವಘಡ ಕುರಿತು ಎರಡ್ಮೂರು ದಿನದಲ್ಲಿ ಮಾಹಿತಿ ಬಹಿರಂಗ: ಡಿಕೆಶಿ

ಕೆಪಿಸಿಸಿ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಹೇಳಿಕೆ
Published 14 ಆಗಸ್ಟ್ 2023, 9:33 IST
Last Updated 14 ಆಗಸ್ಟ್ 2023, 9:33 IST
ಅಕ್ಷರ ಗಾತ್ರ

ಬೆಂಗಳೂರು: 'ಕಮಿಷನ್ ಹೆಸರಿನಲ್ಲಿ ಸುಳ್ಳು ಆರೋಪ‌ ಮಾಡಿ ಹೆದರಿಸಲು ವಿರೋಧ ಪಕ್ಷದವರು ಯತ್ನಿಸುತ್ತಿದ್ದಾರೆ. ಯಾರನ್ನೋ‌ ಹೆದರಿಸಿದಂತೆ ನನ್ನನ್ನು ಹೆದರಿಸಲು ಆಗದು' ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.‌ ಶಿವಕುಮಾರ್ ಹೇಳಿದರು.

ಸೋಮವಾರ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಮಾತಮಾಡಿದ ಅವರು, 'ಕಮಿಷನ್ ಆರೋಪ ಎಲ್ಲಿಂದ ಬಂತು? ಕಾಮಗಾರಿಗಳ ನೈಜತೆ ಪರಿಶೀಲಿಸಿ ಬಿಲ್ ಪಾವತಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಆ ಕೆಲಸವನ್ನು ನಾವು ಮಾಡುತ್ತಿದ್ದೇವೆ. ತನಿಖೆಗಾಗಿ ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ವರದಿ ಬರಲಿ, ಎಲ್ಲವೂ ಗೊತ್ತಾಗುತ್ತದೆ' ಎಂದರು.

'ಪಕ್ಷಕ್ಕೆ ಮುಜುಗರ ಆಗುವಂತಹ ಕೆಲಸವನ್ನು ಯಾವತ್ತೂ ಮಾಡಿಲ್ಲ. ಹಾಗೆ ಮಾಡಿದ್ದರೆ ನಾನು ಜೈಲಿನಲ್ಲಿದ್ದಾಗ ಸೋನಿಯಾ ಗಾಂಧಿಯವರು ಅಲ್ಲಿಗೆ ಬಂದು ನನ್ನನ್ನು ವಿಚಾರಿಸುತ್ತಿರಲಿಲ್ಲ' ಎಂದು ಹೇಳಿದರು.

'ನಾನು ಎಷ್ಟು ತೆರಿಗೆ ಪಾವತಿಸುತ್ತೇನೆ? ಎಷ್ಟು ಆಸ್ತಿ ಹೊಂದಿದ್ದೇನೆ? ಎಂಬುದನ್ನು ಪ್ರಾಮಾಣಿಕವಾಗಿ ಘೋಷಿಸಿದ್ದೇನೆ' ಎಂದರು.

ಬಿಬಿಎಂಪಿ ಕಚೇರಿಯಲ್ಲಿ ನಡೆದ ಬೆಂಕಿ ಅವಘಡ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಲಾಗಿದೆ. ಎರಡರಿಂದ ಮೂರು ದಿನಗಳಲ್ಲಿ ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT