ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೀಮಪ್ಪ ಗಡಾದ್ ಅವರಿಗೆ ʻಮಾಹಿತಿ ಹಕ್ಕು ಸೇವಾ ಭೂಷಣʼ ಪ್ರಶಸ್ತಿ

Published 3 ಜೂನ್ 2023, 15:37 IST
Last Updated 3 ಜೂನ್ 2023, 15:37 IST
ಅಕ್ಷರ ಗಾತ್ರ

ಬೆಂಗಳೂರು: ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ್ ಅವರನ್ನು ‘ಮಾಹಿತಿ ಹಕ್ಕು ಸೇವಾ ಭೂಷಣ’ ಪ್ರಶಸ್ತಿಗೆ ಕನ್ನಡ ಸಾಹಿತ್ಯ ಪರಿಷತ್ತು ಆಯ್ಕೆ ಮಾಡಿದೆ.

ಮಾಹಿತಿ ಹಕ್ಕಿನ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸಾಧಕರಿಗೆ ಈ ಪ್ರಶಸ್ತಿಯನ್ನು ಎಂಟು ವರ್ಷಗಳಿಂದ ಪರಿಷತ್ತು ನೀಡುತ್ತಿದೆ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ್ ಅವರಿಗೆ ₹5 ಸಾವಿರ ನಗದು, ಪ್ರಶಸ್ತಿ ಫಲಕ ನೀಡಲಾಗುವುದು. ಮಾಹಿತಿ ಹಕ್ಕು ತಜ್ಞ ಜೆ.ಎಂ. ರಾಜಶೇಖರ ಅವರ ಹೆಸರಿನಲ್ಲಿ ಪಿ. ಮಹೇಶ್ ಅವರು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಈ ದತ್ತಿ ನಿಧಿಯನ್ನು 2014ರಲ್ಲಿ ಸ್ಥಾಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT