ಭಾನುವಾರ, ಮಾರ್ಚ್ 29, 2020
19 °C

ಕೋವಿಡ್–19 ಶಂಕಿತನೊಂದಿಗೆ ಇನ್ಫೊಸಿಸ್ ಸಿಬ್ಬಂದಿ ಭೇಟಿ; ಕಚೇರಿ ಖಾಲಿ ಮಾಡಿದ ಕಂಪನಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಇನ್ಫೊಸಿಸ್‌

ಬೆಂಗಳೂರು: ಕೊರೊನಾ ವೈರಸ್‌ ಸೋಂಕು ತಗುಲಿದೆ ಎಂದು ಶಂಕಿಸಲಾಗಿರುವ ವ್ಯಕ್ತಿಯನ್ನು ಇನ್ಫೊಸಿಸ್‌ ಸಿಬ್ಬಂದಿಯೊಬ್ಬರು ಸಂಪರ್ಕ ಮಾಡಿರುವುದು ತಿಳಿದು ಬಂದಿದೆ. ಇದರಿಂದಾಗಿ ಬೆಂಗಳೂರಿನ ಇನ್ಫೊಸಿಸ್‌ ಆವರಣದ ಕಚೇರಿ ಕಟ್ಟಡವೊಂದನ್ನು ಖಾಲಿ ಮಾಡಲಾಗಿದೆ. 

ಹವಾನಿಯಂತ್ರಿತ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಐಟಿ ಸಂಸ್ಥೆಯ ಉದ್ಯೋಗಿಗಳು ಕೆಲವು ದಿನಗಳ ವರೆಗೆ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಕರ್ನಾಟಕ ಸರ್ಕಾರ ಸಲಹೆ ನೀಡಿದೆ. ಇದರ ಬೆನ್ನಲ್ಲೇ ಇನ್ಫೊಸಿಸ್‌ ಎಲೆಕ್ಟ್ರಾನಿಕ್‌ ಸಿಟಿ ಫೇಸ್‌ 11ರ ಆವರಣದಲ್ಲಿರುವ ಕಚೇರಿಯಿಂದ ಸಿಬ್ಬಂದಿಯನ್ನು ಸ್ಥಳಾಂತರಿಸಲಾಗಿದೆ.  

'ಐಐಪಿಎಂ ಕಟ್ಟಡದಲ್ಲಿ ತಂಡದ ಸದಸ್ಯರೊಬ್ಬರು ಕೋವಿಡ್‌–19 ಶಂಕಿತ ವ್ಯಕ್ತಿಯೊಂದಿಗೆ ಸಂಪರ್ಕಿಸಿರುವ ಸಾಧ್ಯತೆ ಇರುವುದಾಗಿ ಮಾಹಿತಿ ದೊರೆತಿದೆ'. ಮುನ್ನೆಚ್ಚರಿಕಾ ಕ್ರಮವಾಗಿ ಶುಕ್ರವಾರ ಐಐಪಿಎಂ ಕಟ್ಟಡದಲ್ಲಿ ಕಾರ್ಯನಿರ್ವಹಣೆ ಸ್ಥಗಿತಗೊಳಿಸಲಾಗಿದೆ ಎಂದು ಕಂಪನಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ. 

ಸಿಬ್ಬಂದಿ ಆತಂಕಕ್ಕೆ ಒಳಗಾಗದೆ ಸಮಾಧಾನದಿಂದ ಇರುವಂತೆ ಇನ್ಫೊಸಿಸ್‌ ನಿರ್ವಹಣಾ ಮಂಡಳಿ ಮನವಿ ಮಾಡಿದೆ. ಕಟ್ಟಡ ಖಾಲಿ ಮಾಡಿರುವುದು ಮುನ್ನಚರಿಕೆಯ ಕ್ರಮವಾಗಿದೆ ಎಂದು ತಿಳಿಸಿದೆ. ಕರ್ನಾಟಕದಲ್ಲಿ ಕೊರೊನಾ ವೈರಸ್‌ ಸೊಂಕು ದೃಢಪಟ್ಟಿರುವ ಆರು ಜನರ ಪೈಕಿ ಮೂವರು ಐಟಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. 

ಇದನ್ನೂ ಓದಿ: 

ಕೊರೊನಾ ವೈರಸ್‌ ಸೊಂಕು ಹರಡದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ಕರ್ನಾಟಕ ಸರ್ಕಾರ ರಾಜ್ಯದಾದ್ಯಂತ ಒಂದು ವಾರ ಶಾಪಿಂಗ್‌ ಮಾಲ್‌, ಚಿತ್ರಮಂದಿರಗಳು, ಬೇಸಿಗೆ ಶಿಬಿರಗಳನ್ನು ಸ್ಥಗಿತಗೊಳಿಸಲು ಆದೇಶಿಸಿದೆ. ಶಾಲಾ–ಕಾಲೇಜುಗಳ ರಜೆ ನೀಡಿದ್ದು, ನಿಗದಿಯಂತೆ ಪರೀಕ್ಷೆಗಳನ್ನು ಮುಂದುವರಿಸಲು ಸೂಚಿಸಿದೆ. ಮದವೆ, ಸಮಾರಂಭಗಳನ್ನು ನಡೆಸದಂತೆಯೂ ಸೂಚನೆ ನೀಡಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು