ನವದೆಹಲಿ: ಇನ್ಫೋಸಿಸ್ ಕಂಪನಿಯ ಆಡಳಿತ ಮಂಡಳಿಯ ಕಾರ್ಯನಿರ್ವಾಹಕೇತರ ಉಪಾಧ್ಯಕ್ಷರಾಗಿ ನಿತಿನ್ ಪರಾಂಜಪೆ ಅವರು ನೇಮಕವಾಗಿದ್ದಾರೆ.

ತಕ್ಷಣದಿಂದ ಜಾರಿಗೆ ಬರುವಂತೆ, ನಿತಿನ್ ಪರಾಂಜಪೆ ಅವರನ್ನು ಕಾರ್ಯನಿರ್ವಾಹಕೇತರ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲು ನಿರ್ದೇಶಕರ ಮಂಡಳಿ ಅನುಮೋದನೆ ನೀಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ನ ಕಾರ್ಯನಿರ್ವಾಹಕೇತರ ಅಧ್ಯಕ್ಷರಾಗಿ ಮತ್ತು ‘ಹೈನೆಕೆನ್ ಎನ್ವಿ’ಯ ಕಾರ್ಯನಿರ್ವಾಹಕೇತರ ಉಪಾಧ್ಯಕ್ಷರಾಗಿ ನಿತಿನ್ ಪರಾಂಜಪೆ ಅಪಾರ ಅನುಭವ ಹೊಂದಿದ್ದಾರೆ ಎಂದು ತಿಳಿಸಿದೆ.

ನಿತಿನ್ ಅವರನ್ನು ಈ ಹುದ್ದೆಗೆ ನೇಮಕ ಮಾಡಿರುವುದು ನಮಗೆ ಸಂತೋಷ ತಂದಿದೆ. ಅವರ ಪರಿಣತಿ ಈಗಾಗಲೇ ಮಂಡಳಿಯ ಮೇಲೆ ಗಮನಾರ್ಹ ಪರಿಣಾಮ ಬೀರಿದೆ. ಅವರ ನಾಯಕತ್ವವನ್ನು ನಾವು ಎದುರು ನೋಡುತ್ತಿದ್ದೇವೆ ಎಂದು ಇನ್ಫೋಸಿಸ್ ಮಂಡಳಿ ಅಧ್ಯಕ್ಷ ನಂದನ್ ನಿಲೇಖಣಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.