ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ಫೊಸಿಸ್ ಪ್ರಶಸ್ತಿ ಪ್ರದಾನ ಡಿ.2ಕ್ಕೆ

Last Updated 21 ನವೆಂಬರ್ 2020, 20:28 IST
ಅಕ್ಷರ ಗಾತ್ರ

ಬೆಂಗಳೂರು: ವಿಜ್ಞಾನ ಮತ್ತು ಸಂಶೋಧನಾ ಕ್ಷೇತ್ರದಲ್ಲಿನ ಪ್ರತಿಭಾವಂತರನ್ನು ಉತ್ತೇಜಿಸಲು ಇನ್ಫೊಸಿಸ್‌ ಸೈನ್ಸ್‌ ಫೌಂಡೇಷನ್‌ ನೀಡುವ ಇನ್ಫೋಸಿಸ್‌ ಪ್ರಶಸ್ತಿ ಪ್ರದಾನ ಸಮಾರಂಭ ಡಿ.2ರಂದು ನಡೆಯಲಿದೆ. ಈ ಬಾರಿ ವರ್ಚುವಲ್‌ ರೂಪದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ.

ಪ್ರತಿ ವರ್ಷ ವಿಜೇತರ ಹೆಸರನ್ನು ಒಂದು ತಿಂಗಳು ಮೊದಲೇ ಘೋಷಿಸಲಾಗುತ್ತಿತ್ತು. ಆದರೆ, ಈ ವರ್ಷ ಕಾರ್ಯಕ್ರಮದ ದಿನವೇ ವಿಜೇತರ ಹೆಸರನ್ನು ಘೋಷಿಸಲು ನಿರ್ಧರಿಸಲಾಗಿದೆ. ಎಂಜಿನಿಯರಿಂಗ್‌ ಮತ್ತು ಕಂಪ್ಯೂಟರ್ ಸೈನ್ಸ್‌, ಮಾನವೀಯತೆ, ಜೀವವಿಜ್ಞಾನ, ಗಣಿತ, ಭೌತವಿಜ್ಞಾನ ಹಾಗೂ ಸಮಾಜ ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಪ್ರಶಸ್ತಿ ನೀಡಲಾಗುತ್ತದೆ. ಈ ಆರು ವಿಭಾಗಗಳಲ್ಲಿ ಆರು ಗಣ್ಯರಿಗೆ ತಲಾ ₹70 ಲಕ್ಷ ನಗದು (1 ಲಕ್ಷ ಅಮೆರಿಕನ್‌ ಡಾಲರ್‌) ಚಿನ್ನದ ಪದಕ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಗುತ್ತದೆ.

‘ಸಮಕಾಲೀನ ಸಂಶೋಧಕರು ಮತ್ತು ವಿಜ್ಞಾನಿಗಳಿಗೆ ಕಳೆದ 12 ವರ್ಷಗಳಿಂದ ಈ ಪ್ರಶಸ್ತಿ ನೀಡಲಾಗುತ್ತಿದೆ. ಈ ಪ್ರಶಸ್ತಿ ಪಡೆದ ಎಲ್ಲರೂ, ಭವಿಷ್ಯದಲ್ಲಿ ಶ್ರೇಷ್ಠ ಸಾಧಕರಾಗಿ ಗುರುತಿಸಿಕೊಂಡಿದ್ದಾರೆ. ವಿಜ್ಞಾನವನ್ನು ಮತ್ತೊಮ್ಮೆ ಮುಖ್ಯವಾಹಿನಿಗೆ ತಂದು ಅದನ್ನು ಹೆಚ್ಚು ಪ್ರಚಲಿತಗೊಳಿಸುವ ಅಗತ್ಯವಿದೆ. ಯುವಪೀಳಿಗೆ ಈ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಪ್ರೇರೇಪಿಸುವ ಉದ್ದೇಶದಿಂದ ಈ ಪ್ರಶಸ್ತಿ ನೀಡಲಾಗುತ್ತಿದೆ’ ಎಂದು ಇನ್ಫೊಸಿಸ್‌ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಹೇಳಿದ್ದಾರೆ.

2009ರಲ್ಲಿ ಸ್ಥಾಪನೆಯಾದ ಇನ್ಫೊಸಿಸ್‌ ಸೈನ್ಸ್‌ ಫೌಂಡೇಷನ್‌ ಈವರೆಗೆ 68 ಸಾಧಕರನ್ನು ಗುರುತಿಸಿ ಗೌರವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT