ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೀಣ್ಯ: ₹100 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ

Last Updated 21 ಜೂನ್ 2022, 19:17 IST
ಅಕ್ಷರ ಗಾತ್ರ

ಬೆಂಗಳೂರು: ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ₹100 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಸಲು ಪೌರಾಡಳಿತ ಮತ್ತು ಸಣ್ಣ ಕೈಗಾರಿಕಾ ಸಚಿವ ಎಂ.ಟಿ.ಬಿ.ನಾಗರಾಜು ಅಧ್ಯಕ್ಷತೆಯ ಉನ್ನತಮಟ್ಟದ ಸಮಿತಿ ಅನುಮೋದನೆ ನೀಡಿದೆ.

ಮಂಗಳವಾರ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ 12 ಸಾವಿರ ಉದ್ಯಮಗಳಿದ್ದು, ವಾರ್ಷಿಕ ₹5,000 ಕೋಟಿ ತೆರಿಗೆ ಸಂಗ್ರಹವಾಗುತ್ತಿದೆ. ಇಲ್ಲಿ ಮೂಲಸೌಕರ್ಯ ಕಲ್ಪಿಸುವುದು ಆದ್ಯತೆಯ ಕೆಲಸವಾಗಿದೆ. ₹100 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಟೆಂಡರ್‌ ಕರೆಯಲು ಸಿದ್ಧತೆ ನಡೆಸುವಂತೆ ನಾಗರಾಜು ಸೂಚಿಸಿದರು.

ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಮೂಲಸೌಕರ್ಯ ಕಲ್ಪಿಸುವ ಕೆಲಸವನ್ನು ಸಮರೋಪಾದಿಯಲ್ಲಿ ನಡೆಸಬೇಕು. ಗುಣಮಟ್ಟ ಮತ್ತು ಪ್ರಮಾಣದ ವಿಷಯದಲ್ಲಿ ಕಟ್ಟೆಚ್ಚರ ವಹಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಪಂಕಜ್‌ಕುಮಾರ್‌ ಪಾಂಡೆ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಇಲಾಖೆ ನಿರ್ದೇಶಕಿ ಸತ್ಯಭಾಮ, ಕೆಎಸ್‌ಎಸ್‌ಐಡಿಸಿ ವ್ಯವಸ್ಥಾಪಕ ನಿರ್ದೇಶಕ ಎಸ್‌.ಜೆ.ಸೋಮಶೇಖರ್‌ ಸೇರಿ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT