ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿ ವೇಗ ಹೆಚ್ಚಿಸುವ ಆವಿಷ್ಕಾರ: ಸುಬ್ರಹ್ಮಣಿಯನ್‌ ಸ್ವಾಮಿ

ರೇವಾ ವಿವಿ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮ
Last Updated 17 ಡಿಸೆಂಬರ್ 2022, 4:54 IST
ಅಕ್ಷರ ಗಾತ್ರ

ಬೆಂಗಳೂರು: ‘ಆವಿಷ್ಕಾರಗಳಿಗೆ ಆದ್ಯತೆ ನೀಡುವ ಮೂಲಕ ದೇಶದ ಅಭಿವೃದ್ಧಿಯ ವೇಗ ಹೆಚ್ಚಿಸಬಹುದು’ ಎಂದು ರಾಜ್ಯಸಭೆಯ ಮಾಜಿ ಸದಸ್ಯಡಾ.ಸುಬ್ರಹ್ಮಣಿಯನ್‌ ಸ್ವಾಮಿ ಅಭಿಪ್ರಾಯಪಟ್ಟರು.

ರೇವಾ ವಿಶ್ವವಿದ್ಯಾಲಯದಲ್ಲಿ ‘ಆರ್‌ಬಿಎಸ್‌ ವಿಶೇಷ ಉಪನ್ಯಾಸ ಸರಣಿ’ ಅಂಗವಾಗಿ ಶುಕ್ರವಾರ ಆಯೋಜಿಸಿದ್ದಉಪನ್ಯಾಸ ಕಾರ್ಯಕ್ರಮದಲ್ಲಿ ‘ಭವಿಷ್ಯದಲ್ಲಿನ ಉತ್ತಮ ಅವಕಾಶಗಳಿಗಾಗಿ ನಾಯಕರ ಅಗತ್ಯ’ ಕುರಿತು ಮಾತನಾಡಿದ ಅವರು, ‘ಭವಿಷ್ಯದಲ್ಲಿ ನಾಯಕರಾಗುವ ಬಯಕೆ ಇರುವ ವ್ಯಕ್ತಿಗಳು ಆವಿಷ್ಕಾರಗಳತ್ತ ಗಮನಹರಿಸಬೇಕು’ ಎಂದು ಸಲಹೆ ನೀಡಿದರು.

‘ವಿಶ್ವದಲ್ಲಿ ಎರಡು ರೀತಿಯ ಜನರಿದ್ದಾರೆ. ಆವಿಷ್ಕಾರಗಳನ್ನು ಕೈಗೊಳ್ಳುವ ಗುಂಪು ಒಂದೆಡೆ ಇದ್ದರೆ, ಇವರಿಗೆ ನೆರವಾಗುವ ಇನ್ನೊಂದು ಗುಂಪು ಇದೆ. ಭವಿಷ್ಯದಲ್ಲಿ ನಾಯಕರಾಗುವವರು ಹೊಸತನ ಮತ್ತು ಹೊಸ ಕಲ್ಪನೆಗಳ ಬಗ್ಗೆ ಚಿಂತನೆ ನಡೆಸಬೇಕು’ ಎಂದು ಸಲಹೆ ನೀಡಿದರು.

‘ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಲ್ಲಿ ಕುತೂಹಲ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ನಾವೀನ್ಯದ ಮೂಲಕ ಭಾರತ ಅಭಿವೃದ್ಧಿ ಹೊಂದಲು ಸಾಧ್ಯವಿದೆ’ ಎಂದು ಅಭಿಪ್ರಾಯಪಟ್ಟರು.

ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಪಿ.ಶ್ಯಾಮರಾಜು ಮಾತನಾಡಿ, ‘ವಿದ್ಯಾರ್ಥಿಗಳು ನಾಯಕತ್ವದ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು. ಈ ಮೂಲಕ ದೇಶಕ್ಕೆ ಕೊಡುಗೆ ನೀಡಬೇಕು’ ಎಂದು ಸಲಹೆ ನೀಡಿದರು.

ಕುಲಪತಿ ಡಾ.ಎಂ. ಧನಂಜಯ, ಸಹ ಕುಲಪತಿ ಡಾ.ಆರ್.ಸಿ. ಬಿರಾದಾರ್, ಡೀನ್ ಡಾ.ಎ. ಶುಭಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT