ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಸ್‌ಒಯು ರಿಜಿಸ್ಟ್ರಾರ್ ವಿರುದ್ಧ ವಿಚಾರಣೆಗೆ ತಡೆ

Last Updated 16 ಅಕ್ಟೋಬರ್ 2020, 4:20 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ(ಕೆಎಸ್‌ಒಯು) ರಿಜಿಸ್ಟ್ರಾರ್ ಡಾ. ಲಿಂಗರಾಜ ಗಾಂಧಿ ವಿರುದ್ಧ ವಿಚಾರಣೆಗೆ ಹೈಕೋರ್ಟ್‌ ಏಕ ಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿದೆ.

ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಮತ್ತು ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಕೆಎಸ್‌ಒಯು ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥ ಡಾ.ಎ.ರಂಗಸ್ವಾಮಿ ಅರ್ಜಿ ಸಲ್ಲಿಸಿದ್ದರು.

‘ಎ.ರಂಗಸ್ವಾಮಿ ವಿರುದ್ಧ ವಿಚಾರಣೆ ನಡೆಯುತ್ತಿದೆ ಎಂಬ ಸುಳ್ಳು ಮಾಹಿತಿಯನ್ನು ಲಿಂಗರಾಜ ಗಾಂಧಿ ನೀಡಿದ್ದರು’ ಎಂಬ ಆರೋಪದಲ್ಲಿ ವಿಚಾರಣೆಗೆ ಏಕ ಸದಸ್ಯ ಪೀಠ ಆದೇಶಿಸಿತ್ತು. ಅದಕ್ಕೆ ತಡೆ ನೀಡಿರುವ ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಪ್ರತಿವಾದಿಗೆ ನೋಟಿಸ್ ನೀಡಿದೆ.

‘ವಿಶ್ವವಿದ್ಯಾಲಯ ತೆಗೆದುಕೊಳ್ಳುವ ನಿರ್ಧಾರಗಳನ್ನು ರವಾನೆ ಮಾಡುವುದಷ್ಟೇ ನನ್ನ ಕೆಲಸ. ನನ್ನ ಮಿತಿಯನ್ನು ಮೀರಿ ಏನನ್ನೂ ಮಾಡಿಲ್ಲ’ ಎಂದು ಲಿಂಗರಾಜ ಗಾಂಧಿ ಮೇಲ್ಮನವಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT