ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತನಿಖಾಧಿಕಾರಿ ಮುಂದುವರಿಕೆ ಪ್ರಸ್ತಾವ ಪರಿಶೀಲನೆ

ಐಎಂಎ ಬಹುಕೋಟಿ ವಂಚನೆ ಪ್ರಕರಣ
Last Updated 17 ಜನವರಿ 2020, 4:22 IST
ಅಕ್ಷರ ಗಾತ್ರ

ಬೆಂಗಳೂರು: ‘ಐ ಮಾನಿಟರಿ ಅಡ್ವೈಸರಿ (ಐಎಂಎ) ಕಂಪನಿಯ ಬಹುಕೋಟಿ ವಂಚನೆ ಪ್ರಕರಣದ ತನಿಖೆ ನೇತೃತ್ವ ವಹಿಸಿರುವ ಸಿಬಿಐ ಹೈದರಾಬಾದ್ ಘಟಕದ ಜಂಟಿ ನಿರ್ದೇಶಕ ಎ.ವೈ.ವಿ ಕೃಷ್ಣ ಅವರನ್ನು ತನಿಖಾಧಿಕಾರಿ ಸ್ಥಾನದಲ್ಲಿ ಮುಂದುವರಿಸಲು ಕೋರಿರುವ ಪ್ರಸ್ತಾವ ಪರಿಶೀಲನೆಯಲ್ಲಿದೆ’ ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಸಿಬಿಐ ಪರ ವಕೀಲ ಪಿ.ಪ್ರಸನ್ನಕುಮಾರ್, ‘ಎ.ವೈ.ವಿ ಕೃಷ್ಣ ಅವರ ಮುಂದುವರಿಕೆಗೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದಕ್ಕೆ ಸಹಾಯಕ ಸಾಲಿಸಿಟರ್ ಜನರಲ್ ಸಿ.ಶಶಿಕಾಂತ್‌, ‘ಕೃಷ್ಣ ಅವರನ್ನು ಮುಂದುವರಿಸುವಂತೆ ಕೋರಿದ ಮತ್ತು ಈ ಕುರಿತ ಪ್ರಗತಿಯ ಕಡತ ಕೇಂದ್ರ ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಸಚಿವಾಲಯದ ಮುಂದಿದೆ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಇದಕ್ಕೆ ನ್ಯಾಯಪೀಠ, ‘ಪ್ರಕರಣದ ತನಿಖೆ ಎಂದಿನಂತೆ ಮುಂದುವರಿಯಲಿ’ ಎಂದು ಸಿಬಿಐಗೆ ಸೂಚಿಸಿ ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT