ಬೆಂಗಳೂರು: ಜಮೀನು ವಿವಾದದ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಲು ₹2 ಲಕ್ಷ ಲಂಚ ಪಡೆಯುತ್ತಿದ್ದ ಚಿಕ್ಕಜಾಲ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರಾಘವೇಂದ್ರ ಎಸಿಬಿ(ಭ್ರಷ್ಟಾಚಾರ ನಿಗ್ರಹ ದಳ) ಬಲೆಗೆ ಬಿದ್ದಿದ್ದಾರೆ.
ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಫಲಕ ಕಿತ್ತು ಹಾಕಿರುವ ಕುರಿತು ಚಿಕ್ಕಜಾಲದ ನಿವಾಸಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ₹10 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ರಾಘವೇಂದ್ರ, ₹8 ಲಕ್ಷವನ್ನು ಈ ಹಿಂದೆಯೇ ಪಡೆದಿದ್ದರು. ಶನಿವಾರ ₹2 ಲಕ್ಷ ಸ್ವೀಕರಿಸುವಾಗ ದಾಳಿ ನಡೆಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
‘ಲಂಚ ಹಣದ ಸಮೇತ ರಾಘವೇಂದ್ರ ಅವರನ್ನು ಬಂಧಿಸಲಾಗಿದೆ. ಹಣ ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ’ ಎಂದು ವಿವರಿಸಿದ್ದಾರೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.