ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಗೆ ಪ್ರೀತಿಸುವಂತೆ ಪೀಡಿಸಿ, ರಸ್ತೆಯಲ್ಲೇ ಆಕೆ ಮೇಲೆ ಹಲ್ಲೆ ಮಾಡಿ ಕಿರುಕುಳ ನೀಡಿರುವ ಘಟನೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

21 ವರ್ಷದ ನೊಂದ ಯುವತಿ ನೀಡಿದ ದೂರು ಆಧರಿಸಿ, ಯಲಹಂಕ ತಾಲ್ಲೂಕಿನ ಬಿಲ್ಲಮಾರನಹಳ್ಳಿಯ ನವೀನ್ಕುಮಾರ್ (29) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

‘ಸಂತ್ರಸ್ತ ಯುವತಿಯು ಉಲ್ಲಾಳ ಮುಖ್ಯರಸ್ತೆಯ ಜ್ಞಾನಜ್ಯೋತಿನಗರದ ಪೇಯಿಂಗ್ ಗೆಸ್ಟ್ನಲ್ಲಿ ವಾಸವಾಗಿದ್ದು, ನಾಗರಬಾವಿಯ ಡೆವಲಪರ್ಸ್ ಕಂಪನಿಯಲ್ಲಿ ಟೆಲಿ ಕಾಲರ್ ಆಗಿ ಕೆಲಸ ಮಾಡುತ್ತಾರೆ. ಆರೋಪಿ, 2024ರ ಸೆಪ್ಟೆಂಬರ್ನಲ್ಲಿ ಇನ್ಸ್ಟಾಗ್ರಾಂ ಮೂಲಕ ಯುವತಿಯ ಪರಿಚಯ ಮಾಡಿಕೊಂಡು, ಆಗಾಗ್ಗೆ ಭೇಟಿಯಾಗುತ್ತಿದ್ದ. ಅಲ್ಲದೆ, ಆಕೆಗೆ ಕರೆ ಮಾಡಿ ಮಾತನಾಡುವುದು ಮತ್ತು ವಾಟ್ಸ್ ಆ್ಯಪ್ ಸಂದೇಶ ಕಳುಹಿಸುವುದು ಮಾಡುತ್ತಿದ್ದ. ಪಿಯುಸಿ ಓದಿರುವ ಈತ ನಿರುದ್ಯೋಗಿ’ ಎಂದು ಪೊಲೀಸರು ಹೇಳಿದ್ದಾರೆ.

‘ಮೂರು ತಿಂಗಳ ಹಿಂದೆ ಪ್ರೇಮ ನಿವೇದನೆ ಮಾಡಿದ್ದ. ಆದರೆ, ಯುವತಿ ಪ್ರೀತಿಸಲು ನಿರಾಕರಿಸಿದ್ದರು. ಆದರೂ ಆಕೆಯ ಹಿಂದೆ ಬಿದ್ದು ಪ್ರೀತಿಸುವಂತೆ ಪೀಡಿಸುತ್ತಿದ್ದ. ಅಲ್ಲದೆ ಆಕೆಯನ್ನು ಹಿಂಬಾಲಿಸುತ್ತಾ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕಿರುಕುಳ ಕೊಡುತ್ತಿದ್ದ’ ಎಂದು ತಿಳಿಸಿದ್ದಾರೆ.

ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆ: ಜ್ಞಾನಜ್ಯೋತಿ ನಗರದ ಪೇಯಿಂಗ್ ಗೆಸ್ಟ್ ಬಳಿ ಸೋಮವಾರ ಬಂದಿದ್ದ ನವೀನ್ಕುಮಾರ್, ಸ್ನೇಹಿತೆಯ ಜತೆ ಹೋಗುತ್ತಿದ್ದ ಯುವತಿಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ, ಬಟ್ಟೆ ಹರಿಯಲು ಯತ್ನಿಸಿದ್ದ. ಸ್ನೇಹಿತೆಯ ಮುಂದೆಯೇ ಯುವತಿಯನ್ನು ಎಳೆದಾಡಿ ಅಸಭ್ಯವಾಗಿ ವರ್ತಿಸಿರುವ ದೃಶ್ಯ ಘಟನಾ ಸ್ಥಳದ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸಂತ್ರಸ್ತೆಯ ದೂರು ಆಧರಿಸಿ ಆರೋಪಿಯನ್ನು ಬಂಧಿಸಿ, ಕಾರು ಜಪ್ತಿ ಮಾಡಿದ್ದಾರೆ. ಲೈಂಗಿಕ ಕಿರುಕುಳ, ಮಹಿಳೆಯ ಗೌರವಕ್ಕೆ ಧಕ್ಕೆ, ಹಲ್ಲೆ, ಯುವತಿಯ ಇಚ್ಛೆಗೆ ವಿರುದ್ಧವಾಗಿ ಅವರನ್ನು ಸಂಪರ್ಕಿಸಲು ಯತ್ನಿಸಿದ ಹಾಗೂ ಸನ್ನೆಯ ಮೂಲಕ ಯುವತಿಯನ್ನು ಅವಮಾನಿಸಿದ ಆರೋಪದಡಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.