ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್‌ ಬಂಕ್‌ಗಳಲ್ಲಿ ಕನ್ನಡ ಫಲಕಕ್ಕೆ ಸೂಚನೆ: ಕೇಂದ್ರ ಪೆಟ್ರೋಲಿಯಂ ಸಚಿವ ಪುರಿ

Published 9 ಜನವರಿ 2024, 16:20 IST
Last Updated 9 ಜನವರಿ 2024, 16:20 IST
ಅಕ್ಷರ ಗಾತ್ರ

ಬೆಂಗಳೂರು: ‘ಕರ್ನಾಟಕದ ಎಲ್ಲ ಪೆಟ್ರೋಲ್‌ ಬಂಕ್‌ಗಳಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಪಟ್ಟಿಯನ್ನು ಕನ್ನಡ ಭಾಷೆಯಲ್ಲಿ ಪ್ರಕಟಿಸುವಂತೆ ಸೂಚನೆ ನೀಡಲಾಗಿದೆ’ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ತಿಳಿಸಿದರು.

ಬಿಜೆಪಿ ರಾಜ್ಯ ಘಟಕದ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಾದೇಶಿಕ ಭಾಷೆಗಳಲ್ಲಿ ದರ ಪಟ್ಟಿ ಪ್ರಕಟಿಸುವಂತೆ ಪೆಟ್ರೋಲ್‌ ಬಂಕ್‌ಗಳ ಮಾಲೀಕರಿಗೆ ಸೂಚಿಸಲಾಗಿದೆ. ಕನ್ನಡದಲ್ಲಿ ದರಪಟ್ಟಿ ಪ್ರಕಟಣೆ ಬುಧವಾರದಿಂದಲೇ ಜಾರಿಗೆ ಬರಲಿದೆ’ ಎಂದರು.

ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ದರ ಏರುಗತಿಯಲ್ಲಿದೆ. ಭಾರತದಲ್ಲಿ ಎರಡು ವರ್ಷಗಳಿಂದ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಕಡಿಮೆಯಾಗಿದೆ. ಜನರು ಈ ಬೆಳವಣಿಗೆಯನ್ನು ಗಮನಿಸುತ್ತಿದ್ದಾರೆ. ಅದಕ್ಕಾಗಿಯೇ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಹೇಳಿದರು.

‘ವಿರೋಧ ಪಕ್ಷಗಳ ‘ಇಂಡಿ’ ಮೈತ್ರಿಕೂಟಕ್ಕೆ ಸಂಚಾಲಕರನ್ನೇ ಆಯ್ಕೆ ಮಾಡಿಕೊಳ್ಳಲು ಆಗುತ್ತಿಲ್ಲ. ಪ್ರಧಾನಿ ಅಭ್ಯರ್ಥಿ ಮತ್ತು ಸಂಚಾಲಕರ ವಿಷಯದಲ್ಲಿ ಅಲ್ಲಿರುವ ಪಕ್ಷಗಳಲ್ಲಿ ಸಹಮತ ಇಲ್ಲ. ವಾಸ್ತವದಲ್ಲಿ ಅದು ಅಸ್ತಿತ್ವದಲ್ಲೇ ಇಲ್ಲದ ಮೈತ್ರಿಕೂಟ’ ಎಂದು ಪುರಿ ಟೀಕಿಸಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಪಿ.ಸಿ.ಮೋಹನ್, ರಾಷ್ಟ್ರೀಯ ವಕ್ತಾರರಾದ ಜಾಫರ್ ಇಸ್ಲಾಂ, ತೂಹಿನ್ ಸಿನ್ಹಾ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT