ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಕಿ ಅರ್ಜಿ ಅಪ್ಲೋಡ್‌ಗೆ ಸೂಚನೆ

ಅನಧಿಕೃತ ಸಾಗುವಳಿ ಸಕ್ರಮ ಪ್ರಕ್ರಿಯೆ
Last Updated 1 ಮೇ 2021, 5:04 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ನಮೂನೆ 57ರಡಿ ಸ್ವೀಕರಿಸಿದ್ದ ಅರ್ಜಿಗಳ ಪೈಕಿ ಬಾಕಿ ಇರುವ 4.83 ಲಕ್ಷ ಅರ್ಜಿಗಳನ್ನು ತಂತ್ರಾಂಶದಲ್ಲಿ ಅಪ್ಲೋಡ್‌ ಮಾಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್ಲ ಜಿಲ್ಲಾಧಿಕಾರಿಗಳಿಗೂ ಶುಕ್ರವಾರ ಸೂಚನೆ ನೀಡಿದ್ದಾರೆ.

2018ರ ಮಾರ್ಚ್‌ 17ರಿಂದ 2019ರ ಮಾರ್ಚ್‌ 16ರವರೆಗೆನಮೂನೆ 57ರ ಅಡಿ ಒಟ್ಟು 8.57 ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಈ ಪೈಕಿ 3.74 ಲಕ್ಷ ಅರ್ಜಿಗಳನ್ನು ತಂತ್ರಾಂಶದಲ್ಲಿ ಅಪ್ಲೋಡ್ ಮಾಡಲಾಗಿತ್ತು. ಅದೇ ಸಮಯದಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾದ ಕಾರಣದಿಂದ 4.83 ಲಕ್ಷ ಅರ್ಜಿಗಳನ್ನು ತಂತ್ರಾಂಶಕ್ಕೆ ಅಪ್ಲೋಡ್‌ ಮಾಡಲು ಸಾಧ್ಯವಾಗಿರಲಿಲ್ಲ.

ಬಾಕಿ ಇರುವ 4.83 ಲಕ್ಷ ಅರ್ಜಿಗಳನ್ನು ತಂತ್ರಾಂಶದಲ್ಲಿ ಅಪ್ಲೋಡ್ ಮಾಡಲು ಮೇ 1ರಿಂದ ಜುಲೈ 31ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT