ಬೆಂಗಳೂರು: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ.
ದೇವಾಲಯಗಳಲ್ಲಿ ಎಲ್ಲ ಸೇವೆಗಳಿಗೆ, ದೀಪಗಳಿಗೆ, ಎಲ್ಲ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ನಂದಿನಿ ತುಪ್ಪವನ್ನೇ ಬಳಸಬೇಕು. ದೇವಸ್ಥಾನಗಳಲ್ಲಿ ತಯಾರಿಸುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.
ರಾಜ್ಯದ ದೇವಸ್ಥಾನಗಳ ಪ್ರಸಾದದ ಪರೀಕ್ಷೆ ನಡೆಸಬೇಕು ಎಂದು ಬಿಜೆಪಿಯ ನಾಯಕರು ಒತ್ತಾಯಿಸಿದ್ದರು. ಇದರ ನಡುವೆ ಧಾರ್ಮಿಕ ದತ್ತಿ ಇಲಾಖೆಯು ಸುತ್ತೋಲೆ ಹೊರಡಿಸಿದೆ.