ಪ್ರಜಾವಾಣಿ ವಾರ್ತೆ

ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ನೀಡುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆದಿದ್ದು, ಮುಖ್ಯಮಂತ್ರಿ ಯಾವ ಸಮುದಾಯಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ಆಯೋಜಿಸಿದ್ದ ನುಲಿಯ ಚಂದಯ್ಯ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.

‘ಭೋವಿ, ಕೊರಮ, ಕೊರಚ ಹಾಗೂ ಲಂಬಾಣಿ ಸಮುದಾಯಗಳೊಂದಿಗೆ ನಾನಿದ್ದೇನೆ. ನಾವು ಒಂದೇ ತಕ್ಕಡಿಯಲ್ಲಿದ್ದೇವೆ. ಒಳ ಮೀಸಲಾತಿ ವಿಚಾರವಾಗಿ ಯಾವ ಸಮುದಾಯದವರು ಕೂಡ ಆತಂಕಪಡುವ ಅಗತ್ಯವಿಲ್ಲ’ ಎಂದರು.

ಕಳೆದ ವರ್ಷದ ಜಯಂತಿ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊರಮ - ಕೊರಚ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪನೆ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ 100*200 ಅಳತೆಯ ನಿವೇಶನವನ್ನು ಉಚಿತವಾಗಿ ನೀಡುವ ಭರವಸೆ ನೀಡಿದ್ದರು. ಈ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ಮತ್ತೊಮ್ಮೆ ತಂದು ಭರವಸೆ ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಸಮುದಾಯಕ್ಕೆ ವಿಧಾನ ಪರಿಷತ್ ಸದಸ್ಯ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ. ಸಮುದಾಯ ಸಂಘಟನೆಯಾಗಿ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಬೇಕು ಎಂದರು.

ಬಾಗಲಕೋಟೆ ಜಿಲ್ಲೆಯಲ್ಲಿರುವ ಶಹನಾಯಿ ವಾದಕ ಸನಾದಿ ಅಪ್ಪಣ್ಣ ಅವರ ಸಮಾಧಿಯನ್ನು ಅಭಿವೃದ್ಧಿಪಡಿಸಿ, ಪ್ರವಾಸಿ ತಾಣವಾಗಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಬಾಗಲಕೋಟೆ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದು, ಮರು ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ನುಲಿಯ ಚಂದಯ್ಯ ಅವರು ಕಾಯಕಯೋಗಿ. ಅವರು ಬಾಳಿದ ಬಾಳು, ಬೋಧಿಸಿದ ನೀತಿ, ರಚಿಸಿದ ವಚನಗಳು ಸರ್ವಕಾಲಕ್ಕೂ ಸರ್ವಸ್ಥಳಕ್ಕೂ ಸಲ್ಲುವಂತಹದು. ಕಾಯಕ ಹಾಗೂ ದಾಸೋಹದ ತತ್ವವನ್ನು ನುಲಿಯ ಚಂದಯ್ಯ ಪ್ರತಿಪಾದಿಸಿದ್ದರು. ಅವರ ತತ್ವ, ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸನ್ಮಾರ್ಗದಲ್ಲಿ ನಡೆಯಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಜಿ. ಚಂದ್ರಣ್ಣ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ವೆಂಕಟೇಶ್, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ, ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಮುನಿರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಗಾಯತ್ರಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.