ಬೆಂಗಳೂರು: ಕೆನರಾ ಬ್ಯಾಂಕ್ ರಿಲೀಫ್ ಆ್ಯಂಡ್ ವೆಲ್ಫೇರ್ ಸೊಸೈಟಿ ಮತ್ತು ಮಾತೃಛಾಯ ಸಂಸ್ಥೆಯ ವತಿಯಿಂದ ನಗರದಲ್ಲಿ ‘ಅಂತರರಾಷ್ಟ್ರೀಯ ದತ್ತು ಮಾಸಾಚರಣೆ’ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಮಕ್ಕಳ ನಿರ್ದೇಶನಾಲಯದ ಉಪನಿರ್ದೇಶಕಿ ಟಿ.ಎಸ್. ಅರುಂಧತಿ, ಬೆಂಗಳೂರು ದಕ್ಷಿಣ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಚ್.ಕೆ. ಆಶಾ ಮತ್ತು ಆಪ್ತ ಸಮಾಲೋಚಕಿ ರೇಣು ಶ್ರೀನಿವಾಸ್ ಭಾಗವಹಿಸಿದ್ದರು. ದತ್ತು ಪ್ರಕ್ರಿಯೆಯ ಮಹತ್ವ, ಕಾನೂನಾತ್ಮಕ ವಿಧಾನಗಳು ಮತ್ತು ಪೋಷಕರಾಗಿ ನಿರ್ವಹಿಸಬೇಕಾದ ಕರ್ತವ್ಯ ಹಾಗೂ ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಲಾಯಿತು.

ಸಂಸ್ಥೆಯ ಗೌರವ ಕಾರ್ಯದರ್ಶಿ ಡಿ.ಎಸ್. ಆನಂದಮೂರ್ತಿ, ಮಹಾಪ್ರಬಂಧಕ ಕೆ.ಎಸ್.ಎಸ್. ಕಾಮತ್, ಹಿರಿಯ ಪ್ರಬಂಧಕಿ ಸುಮಂಗಲಾ ಜಿ. ಅಂಗಡಿ ಉಪಸ್ಥಿತರಿದ್ದರು. 50ಕ್ಕೂ ಹೆಚ್ಚು ದತ್ತು ಪೋಷಕರು ಮತ್ತು ಸಂಭವನೀಯ ದತ್ತು ಪೋಷಕರು ಚರ್ಚೆಯಲ್ಲಿ ಭಾಗವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.