ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹11 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ: ಅಂತರರಾಜ್ಯ ಡ್ರಗ್‌ ಪೆಡ್ಲರ್‌ ಸೆರೆ

Last Updated 9 ಡಿಸೆಂಬರ್ 2021, 3:16 IST
ಅಕ್ಷರ ಗಾತ್ರ

ಬೆಂಗಳೂರು: ಜೈಲಿನಿಂದ ಬಿಡುಗಡೆಯಾದ ನಂತರವೂ ಸಹಚರರ ಜೊತೆಗೂಡಿ ಮಾದಕ ವಸ್ತು ಮಾರಾಟ ದಂಧೆ ನಡೆಸುತ್ತಿದ್ದ ಅಂತರರಾಜ್ಯ ಡ್ರಗ್‌ ಪೆಡ್ಲರ್‌ನನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಕೇರಳದ ಅನೂಪ್‌ ಬಂಧಿತ. ಈತನಿಂದ ₹11 ಕೋಟಿ ಮೌಲ್ಯದ 11 ಕೆ.ಜಿ.ಹಶಿಶ್‌ ಆಯಿಲ್‌ ಹಾಗೂ 250 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಬಂಧಿತ ಆರೋಪಿ, ಆತನ ಸಹಚರರು ಆಂಧ್ರಪ್ರದೇಶ ಹಾಗೂ ಇತರ ರಾಜ್ಯಗಳಿಂದ ಹಶಿಶ್‌ ಆಯಿಲ್‌ ಮತ್ತು ಗಾಂಜಾ ತಂದು ಬೆಂಗಳೂರು, ಮಂಗಳೂರು ಹಾಗೂ ಕೇರಳದಲ್ಲಿ ಮಾರಾಟ ಮಾಡುತ್ತಿದ್ದರು. ಈ ಕುರಿತು ಒಂದು ತಿಂಗಳ ಹಿಂದೆ ಮಾಹಿತಿ ಲಭ್ಯವಾಗಿತ್ತು. ಈ ಜಾಲದ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು. ಇದರಲ್ಲಿ ಭಾಗಿಯಾಗಿದ್ದವರ ಮೇಲೆ ನಿಗಾ ಇಟ್ಟಿದ್ದ ತಂಡವು ಅವರ ಚಲನವಲನಗಳನ್ನೂ ಸೂಕ್ಷ್ಮವಾಗಿ ಗಮನಿಸುತ್ತಿತ್ತು’ ಎಂದು ಅವರು ಹೇಳಿದ್ದಾರೆ.

‘ಹೆಬ್ಬಾಳ ಮೇಲ್ಸೇತುವೆಯ ಬಳಿ ಅಪರಿಚಿತ ವ್ಯಕ್ತಿಯೊಬ್ಬ ಗ್ರಾಹಕರಿಗೆ ಗಾಂಜಾ ಮಾರುತ್ತಿರುವ ಬಗ್ಗೆ ಇದೇ 4ರಂದು ಮಾಹಿತಿ ಲಭಿಸಿತ್ತು. ಸಂಜೆ 4.20ರ ವೇಳೆಗೆ ಸ್ಥಳಕ್ಕೆ ಹೋಗಿ ಆತನನ್ನು ಬಂಧಿಸಲಾಗಿತ್ತು. ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಆತ ಅಂತರರಾಜ್ಯ ಡ್ರಗ್‌ ಪೆಡ್ಲರ್‌ ಎಂಬ ಮಾಹಿತಿ ಗೊತ್ತಾಯಿತು. ಆತನ ಬಳಿ ಇದ್ದ ಬ್ಯಾಗ್‌ ಪರಿಶೀಲಿಸಿದಾಗ ಹಶಿಶ್‌ ಆಯಿಲ್‌ ಹಾಗೂ ಗಾಂಜಾ ಸಿಕ್ಕಿತ್ತು’ ಎಂದು ಮಾಹಿತಿ ನೀಡಿದ್ದಾರೆ.

‘ಬಂಧಿತನ ವಿರುದ್ಧ ಬಾಣಸವಾಡಿಯ ಅಬಕಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ಸಹಚರರ ವಿರುದ್ಧ ಬೆಂಗಳೂರಿನ ವಿವಿಧ ಠಾಣೆ ಹಾಗೂ ಉಡುಪಿ ಜಿಲ್ಲೆಯ ಪೊಲೀಸ್‌ ಠಾಣೆಗಳಲ್ಲೂ ಪ್ರಕರಣಗಳಿವೆ. ಇತ್ತೀಚೆಗಷ್ಟೆ ಜೈಲಿನಿಂದ ಬಿಡುಗಡೆಯಾಗಿದ್ದ ಇವರು ಮತ್ತೆ ಮಾದಕ ವಸ್ತು ಮಾರಾಟ ದಂಧೆ ಮುಂದುವರಿಸಿರುವುದು ವಿಚಾರಣೆಯಿಂದ ತಿಳಿದುಬಂದಿದೆ. ಪ್ರಮುಖ ಪೆಡ್ಲರ್‌ವೊಬ್ಬ ತಲೆಮರೆಸಿಕೊಂಡಿದ್ದಾನೆ. ಆತನ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT