ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೇಪಾಳದಲ್ಲಿ ‘ಅಂತರರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ’ ನಾಳೆ

Published 23 ನವೆಂಬರ್ 2023, 16:19 IST
Last Updated 23 ನವೆಂಬರ್ 2023, 16:19 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೇಪಾಳದ ಕಠ್ಮಂಡುವಿನಲ್ಲಿ ‘ಅಂತರರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ’ವನ್ನು ನ.25ರಂದು ಆಯೋಜಿಸಲಾಗಿದೆ.

ಕಠ್ಮಂಡುವಿನಲ್ಲಿರುವ ಪಶುಪತಿ ದೇವಾಲಯ ಆವರಣದಲ್ಲಿ ಕರ್ನಾಟಕ ರಾಜ್ಯೋತ್ಸವ ಶನಿವಾರ ನಡೆಯಲಿದ್ದು, ಮೈಸೂರು ಮಹಾರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಎ. ಅಮೃತ್‌ರಾಜ್‌ ತಿಳಿಸಿದರು.

‘ಮೈಸೂರು ಮಹಾರಾಜರ ಪತ್ತನಿ ತ್ರಿಶಿಖಾಕುಮಾರಿ ಒಡೆಯರ್‌, ಐಪಿಎಸ್‌ ಅಧಿಕಾರಿ ರೂಪಾ ಡಿ. ಮೌದ್ಗೀಲ್‌, ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತ ಮಂಜುನಾಥ ಸ್ವಾಮಿ, ಕಂದಾಯ ವಿಭಾಗದ ಲಕ್ಷ್ಮೀದೇವಿ, ಹಿರಿಯ ವಕೀಲ ಶ್ರೀನಿವಾಸ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಗಾಯಕಿ ಅನುರಾಧಾ ಭಟ್‌ ಅವರ ಸಂಗೀತ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬಿಬಿಎಂಪಿಯ ಉಪ ಆರೋಗ್ಯಾಧಿಕಾರಿ ಡಾ. ಕಲಾವತಿ ದೇವಿ ಅವರಿಗೆ ಸನ್ಮಾನ ಮಾಡಲಾಗುತ್ತದೆ. ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT