ಮಂಗಳವಾರ, ಮಾರ್ಚ್ 31, 2020
19 °C

ಮಹಿಳಾ ಉದ್ಯಮಿಗಳಿಗೆ ಡಿಜಿಟಲ್ ವೇದಿಕೆ: ಸಿ.ಎನ್. ಅಶ್ವತ್ಥನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮಹಿಳಾ ಉದ್ಯಮಿಗಳ ಒಕ್ಕೂಟದ ಎಲ್ಲ ಕೆಲಸವನ್ನು ಡಿಜಿಟಲ್‌ ವೇದಿಕೆಯಡಿ ತರಲು ಇಲಾಖೆಯಿಂದ ಸಂಪೂರ್ಣ ನೆರವು ನೀಡುವುದಾಗಿ ಐಟಿ-ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಭರವಸೆ ನೀಡಿದ್ದಾರೆ.

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಉದ್ಯಮಿಗಳ ಒಕ್ಕೂಟ (ಯುಬಿಯುಎನ್‌ಟಿಯು)  ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಕಾಗದ ಪತ್ರದಲ್ಲಿ ನಡೆಯುತ್ತಿರುವ ಒಕ್ಕೂಟದ ಎಲ್ಲ ಕಾರ್ಯಗಳನ್ನು ಒಂದೇ ಡಿಜಿಟಲ್‌ ವೇದಿಕೆಗೆ ತರಲು ಐಟಿ-ಬಿಟಿ ಇಲಾಖೆ ಸಂಪೂರ್ಣ ನೆರವು ನೀಡುತ್ತದೆ’ ಎಂದು ಹೇಳಿದರು.

‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು  ಆರ್ಥಿಕ ವಲಯದಲ್ಲಿ ಕಾನೂನು ಸುಧಾರಣೆ ತಂದು ಸುಲಭವಾಗಿ ವ್ಯವಹಾರ ನಡೆಸುವುದಕ್ಕೆ ಒತ್ತು ನೀಡಿದ್ದಾರೆ’ ಎಂದರು.

ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌, ಯುಬಿಯುಎನ್‌ಟಿಯು ಹಾಗೂ ಕರ್ನಾಟಕ ಕೌಶಲ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ರತ್ನಪ್ರಭಾ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು