ಸೋಮವಾರ, 5 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಸ್‌ಆರ್‌ಟಿಸಿ ಕಚೇರಿಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನ

Last Updated 8 ಮಾರ್ಚ್ 2023, 20:46 IST
ಅಕ್ಷರ ಗಾತ್ರ

ಬೆಂಗಳೂರು: ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಮಹಿಳಾ ದಿನವನ್ನು ಆಚರಿಸಲಾಯಿತು. ದೇವದಾಸಿ ಪದ್ಧತಿ ನಿರ್ಮೂಲನೆಗೆ ಹೋರಾಟ ನಡೆಸಿದ ನಾರಿಶಕ್ತಿ ಪ್ರಶಸ್ತಿ ಪುರಸ್ಕೃತೆ ಶೋಭಾ ಗಸ್ತಿ ಅವರನ್ನು ಕೆಎಸ್‌ಆರ್‌ಟಿಸಿಯಿಂದ ಸನ್ಮಾನಿಸಲಾಯಿತು.

‘ಮಹಿಳೆಯರಿಗೆ ಶಿಕ್ಷಣವೇ ಆಸ್ತಿ ಮತ್ತು ಶಕ್ತಿ. ಸಮಾಜ ಕೂಡ ಹೆಣ್ಣು ಮಕ್ಕಳನ್ನು ಗೌರವಿಸಬೇಕು. ಸಾರಿಗೆ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಗಳು ಅಭಿನಂದನೆಗೆ ಅರ್ಹರು’ ಎಂದರು.

ಕೆಎಸ್‌ಆರ್‌ಟಿಸಿಯಲ್ಲಿ ಒಟ್ಟು 2,821 ಮಹಿಳಾ ಉದ್ಯೋಗಿಗಳಿದ್ದು, ನಿಗಮವು ಎಲ್ಲಾ ರೀತಿಯಲ್ಲಿಯೂ ಅವರನ್ನು ಗೌರವಿಸಿ ಪ್ರೋತ್ಸಾಹಿಸುತ್ತಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ತಿಳಿಸಿದರು. ನಿಗಮದ 17 ವಿಭಾಗಗಳ ಒಟ್ಟು 42 ಸಿಬ್ಬಂದಿಗಳನ್ನು ಇದೇ ವೇಳೆ ಸನ್ಮಾನಿಸಲಾಯಿತು.

ಮಹಿಳಾ ದಿನದ ಅಂಗವಾಗಿ ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬಸ್ ಹತ್ತಿದ ಮಹಿಳೆಯರು ಉಚಿತ ಪ್ರಯಾಣ ಮಾಡಿ ಸಂತಸಪಟ್ಟರು.

ಬಿಎಂಟಿಸಿ ಬಸ್‌ನಲ್ಲಿ ಪ್ರತಿನಿತ್ಯ ಒಟ್ಟು 29 ಲಕ್ಷ ಮಂದಿ ಪ್ರಯಾಣಿಸುತ್ತಿದ್ದು, ಬುಧವಾರ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಅಂದಾಜು 15 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT