‘ಯೋಗ ಉತ್ಸವ’ಕ್ಕೆ ಪೂರ್ವ ತಯಾರಿ

7
ಅಂತರರಾಷ್ಟ್ರೀಯ ಯೋಗ ದಿನಾಚರಣೆ

‘ಯೋಗ ಉತ್ಸವ’ಕ್ಕೆ ಪೂರ್ವ ತಯಾರಿ

Published:
Updated:

ಬೆಂಗಳೂರು:‘ಸಾವಿರಾರು ವರ್ಷಗಳಿಂದ ಯೋಗ ಬದುಕಿನ ಭಾಗವಾಗಿದೆ. ಯೋಗ ವಿಜ್ಞಾನಕ್ಕೆ ಭಾರತವೇ ವಿಶ್ವ ಗುರು’ ಎಂದು ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ತೇಜಸ್ವಿನಿ ಅನಂತಕುಮಾರ್ ಹೇಳಿದರು.

ನಗರದ ಕಿತ್ತೂರು ರಾಣಿ ಚೆನ್ನಮ್ಮ ಆಟದ ಮೈದಾನದಲ್ಲಿ ಬುಧವಾರ ಅದಮ್ಯ ಚೇತನ ಸಂಸ್ಥೆ ಮತ್ತು ಬಿ.ಎಂ.ಐ.ಟಿ ಕಾಲೇಜು ಜಂಟಿಯಾಗಿ ಹಮ್ಮಿಕೊಂಡಿದ್ದ ‘ಯೋಗ ಉತ್ಸವ’ದ ಪೂರ್ವ ತಯಾರಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿಯವರ ಪ್ರಯತ್ನದಿಂದಾಗಿ ಯೋಗ ಅಂತರರಾಷ್ಟ್ರೀಯ ಮನ್ನಣೆ ಪಡೆದುಕೊಂಡಿದೆ’ ಎಂದರು. 

ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಅದಮ್ಯ ಚೇತನ ಹಾಗೂ ಬಿ.ಎಂ.ಐ.ಟಿ ಕಾಲೇಜು ಸಹಯೋಗದಲ್ಲಿ ‌ಇದೇ 23ರಂದು ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಮುಖ್ಯ ಅತಿಥಿಯಾಗಿ ಕೇಂದ್ರ ಸಚಿವ ಅನಂತಕುಮಾರ್  ಭಾಗವಹಿಸಲಿದ್ದು, ಚಕ್ರವರ್ತಿ ಸೂಲಿಬೆಲೆ ಯೋಗದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಹೇಳಿದರು.

‘50ಕ್ಕೂ ಹೆಚ್ಚು ಶಾಲೆಗಳ ಮಕ್ಕಳು ಭಾಗವಹಿಸಲಿದ್ದಾರೆ. ಸರ್ಕಾರಿ ಶಾಲೆಗಳ ಮಕ್ಕಳಿಗೂ ಆದ್ಯತೆ ನೀಡಲಾಗಿದ್ದು, ಯೋಗದ ಬಗ್ಗೆ ಜನಸಾಮಾನ್ಯರಲ್ಲಿ ತಿಳಿವಳಿಕೆ ಮೂಡಿಸುವುದು ನಮ್ಮ ಉದ್ದೇಶವಾಗಿದೆ’ ಎಂದು ಹೇಳಿದರು. 
ಪೂರ್ವ ತಾಲೀಮು ಕಾರ್ಯಕ್ರಮದಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಯೋಗಾಭ್ಯಾಸ ಪ್ರದರ್ಶನ ಮಾಡಿದರು.

ಬರಹ ಇಷ್ಟವಾಯಿತೆ?

 • 2

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !