ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರರಾಜ್ಯ ಗಾಂಜಾ ಜಾಲ ಪತ್ತೆ: ₹1 ಕೋಟಿ ಮೌಲ್ಯದ ಗಾಂಜಾ ಜಪ್ತಿ

Last Updated 27 ಆಗಸ್ಟ್ 2020, 8:34 IST
ಅಕ್ಷರ ಗಾತ್ರ

ಬೆಂಗಳೂರು: ಆಂಧ್ರಪ್ರದೇಶದ ಈಸ್ಟ್ ಗೋದಾವರಿ ಜಿಲ್ಲೆಯಿಂದ ಗಾಂಜಾವನ್ನು ತಂದು ಅಂತರ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದು, ₹1 ಕೋಟಿ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

‘ಗಾಂಜಾ ಮಾರಾಟ ಆರೋಪದಡಿ ಮೈಸೂರಿನ ಕೆ.ಆರ್.ಪುರದ ಸಮೀರ್ (37), ಕೈಸರ್ ಪಾಷಾ (41) ಹಾಗೂ ಚಿಕ್ಕಬಳ್ಳಾಪುರದ ಇಸ್ಮಾಯಿಲ್ ಶರೀಫ್ (38) ಬಂಧಿತರು. ಇವರು ಹಲವು ವರ್ಷಗಳಿಂದ ಗಾಂಜಾ ಮಾರಾಟ ಹಾಗೂ ಸರಬರಾಜಿನಲ್ಲಿ ತೊಡಗಿದ್ದರು’ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದರು.

‘ಆರೋಪಿ ಸಮೀರ್, ಚಾಲಕನಾಗಿದ್ದಾನೆ. ಈಸ್ಟ್ ಗೋದಾವರಿ ಜಿಲ್ಲೆಯಿಂದ ಕಂಟೈನರ್ ಲಾರಿಯಲ್ಲಿ ಗಾಂಜಾ ಸಾಗಣೆ ಮಾಡುವ ಜವಾಬ್ದಾರಿಯನ್ನು ಆತನೇ ವಹಿಸಿಕೊಂಡಿದ್ದ. ಸಹಚರರಾದ ಕೈಸರ್ ಪಾಷಾ ಹಾಗೂ ಇಸ್ಮಾಯಿಲ್ ಮೂಲಕ ಮಧ್ಯವರ್ತಿಗಳಿಗೆ ಗಾಂಜಾ ಮಾರಿಸುತ್ತಿದ್ದ’ಎಂದೂ ಹೇಳಿದರು.

‘ಕರ್ನಾಟಕದ ಹಲವೆಡೆ ಆರೋಪಿಗಳು ಪೆಡ್ಲರ್ ಮೂಲಕ ಗಾಂಜಾ ಮಾರಿಸುತ್ತಿದ್ದರು. ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲೂ ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದರು’ಎಂದೂ ಕಮಲ್ ಪಂತ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT